PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ,ಏ.೧೩: ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ದಿಗಾಗಿ ಕೇಂದ್ರದ ಯುಪಿಎ ಸರ್ಕಾರ ಸಂವಿಧಾನದ ೩೭೧ನೇ (ಜೆ) ಕಲಂ ಜಾರಿಗೆ ತಂದು ಈ ಭಾಗದ ಜನತೆಗೆ ಅನುಕೂಲತೆ ದೊರಕಿಸಿ ಕೊಟ್ಟಿದ್ದು ಈ ಕಲಂ ಜಾರಿಗೆಯಾಗಿರುವುದು ಯುಪಿಎ ಕೊಡುಗೆ ಈ ಭಾಗದ ಜನತೆಗೆ ಸಿಕ್ಕಿದೆ ಈ ಹಿನ್ನಲೆಯಲ್ಲಿ ೧೬ನೇ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ ಈ ಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದು  ನಗರಸಭೆಯ ಉಪಾಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲೆ ಕಾಂಗ್ರೆಸ್ ಪಕ್ಷದ ನಾಯಕ ಅಮ್ಜದ್ ಪಟೇಲ್ ಹೇಳಿದರು.
     ಅವರು ರವಿವಾರ ಕೊಪ್ಪಳ ನಗರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ,ಬಸವರಾಜ್ ಹಿಟ್ನಾಳರವರ ಪರ ಭಹಿರಂಗ ಮತಯಾಚನೆ ಮಾಡಿ ಈ ಕುರಿತು ಹೇಳಿಕೆ ನೀಡಿರುವ ಅವರು, ೩೭೧ನೇ ಕಲಂ ಜಾರಿಗೆಯಿಂದ ಈ ಭಾಗ ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕವಾಗಿ ಹೆಚ್ಚು ಅಭಿವೃದ್ದಿ ಹೊಂದಲಿದ್ದು, ಈ ಭಾಗದ ಜನರಿಗೆ ನಮ್ಮ  ಕೇಂದ್ರದ ಯುಪಿಎ ಸರ್ಕಾರ ಕೊಡುಗೆಯಾಗಿ ೩೭೧ನೇ ಕಲಂ ಜಾರಿಗೆ ತಂದಿದ್ದಾರೆ ಎಂದರು.
   ಮುಂದುವರೆದು ಮಾತನಾಡಿದ ಅವರು, ಹೈ-ಕ ಪ್ರದೇಶದ ಬೀದರ್, ಗುಲ್ಬರ್ಗಾ, ರಾಯಚೂರು, ಕೊಪ್ಪಳ, ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಭವವಿದೆ ಎಂದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ನಾಡಿನ ಜನಸಾಮಾನ್ಯರ ಮನಸ್ಸಿನಲ್ಲಿ ಮನೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಕೂಡ ಕಾಂಗ್ರೆಸ್‌ಗೆ ಅಧಿಕ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು  ನಗರಸಭೆಯ ಉಪಾಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲೆ ಕಾಂಗ್ರೆಸ್ ಪಕ್ಷದ ನಾಯಕ ಅಮ್ಜದ್ ಪಟೇಲ್ ಹೇಳಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top