PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕಾಲೇಜು ವಿದ್ಯಾರ್ಥಿಗಳು ಕೊಪ್ಪಳ ನಗರದಲ್ಲಿ ಬುಧವಾರ ಮತದಾರರ ಜಾಗೃತಿ ಬೃಹತ್ ಜಾಥಾ ನಡೆಸಿದರು.
  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾದ ಮತದಾರರ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.  
  ಕಾಲೇಜಿನ ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ ಅವರು ಜಾಗೃತಿ ಜಾಥಾದ ನೇತೃತ್ವ ವಹಿಸಿದ್ದರು.  ಕಾಲೇಜಿನ ಪ್ರೊ. ಪ್ರಭುರಾಜ ನಾಯಕ್, ಸೇರಿದಂತೆ ಎಲ್ಲ ಉಪನ್ಯಾಸಕರುಗಳು, ಸಿಬ್ಬಂದಿಗಳು ಉತ್ಸುಕತೆಯಿಂದ ಜಾಥಾದಲ್ಲಿ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನರಾವ್, ರಾಮಕೃಷ್ಣಯ್ಯ ಮುಂತಾದವರು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಮತದಾರರ ಜಾಗೃತಿಗಾಗಿ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಯಿತು.  ಮತದಾನ ನಮ್ಮ ಹಕ್ಕು,  ಎಲ್ಲರೂ ತಪ್ಪದೆ ಮತ ಚಲಾಯಿಸಿ, ಮತದಾರರು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ, ನೈತಿಕ ಮತದಾನ ಮಾಡಬೇಕು.  ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಸಹಕರಿಸಿ ಎಂಬುದಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಸಂದೇಶ ನೀಡಿದರು.  

Advertisement

0 comments:

Post a Comment

 
Top