PLEASE LOGIN TO KANNADANET.COM FOR REGULAR NEWS-UPDATES

 ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಬರುವ ಏ. ೧೭ ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತಾಗಲು, ಅವರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರದಂದು ಯಲಬುರ್ಗಾ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ಮ್ಯಾರಥಾನ್ ಓಟ ಸ್ಪರ್ಧೆ ಆಯೋಜಿಸಲಾಯಿತು.
  ಮ್ಯಾರಥಾನ್ ಓಟ ಸ್ಫರ್ಧೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.  ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡರು.  ಈ ಸ್ಪರ್ಧೆಯಲ್ಲಿ ಕಳಕಯ್ಯ ಹಿರೇಮಠ- ಪ್ರಥಮ, ಮಂಜಪ್ಪ ಪುರದ- ದ್ವಿತೀಯ, ಯಮನೂರಪ್ಪ ರಾಠೋಡ್- ತೃತೀಯ ಸ್ಥಾನ ಪಡೆದುಕೊಂಡರು.  ವಿದ್ಯಾರ್ಥಿನಿಯರ ವಿಭಾಗದಲ್ಲಿ ಶೀಲಾ ಈರಪ್ಪ- ಪ್ರಥಮ, ಶಾಯಿನ್ ಬೇಗಂ- ದ್ವಿತೀಯ ಹಾಗೂ ಜ್ಯೋತಿ ಪೊಲೀಸ್ ಪಾಟೀಲ್ ತೃತೀಯ ಸ್ಥಾನ ಪಡೆದುಕೊಂಡರು. 
   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ,  ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜಯಪ್ಪ, ತಹಸಿಲ್ದಾರ್ ಮಡಿವಾಳರ್, ವಾರ್ತಾಧಿಕಾರಿ ತುಕಾರಾಂರಾವ್, ಕ್ರೀಡಾ ಇಲಾಖೆಯ ಅಧಿಕಾರಿ ಪಿ. ರಾಮಕೃಷ್ಣಯ್ಯ, ಕಾಲೇಜುಗಳ ಪ್ರಾಂಶುಪಾಲರುಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top