PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆ  ನಿಮಿತ್ಯ ವಿವಿಧ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು, ಚುನಾವಣಾ ಕರ್ತವ್ಯಕ್ಕೆ ಅಥವಾ ತರಬೇತಿ ಕಾರ್ಯಕ್ರಮಗಳಿಗೆ ಗೈರು ಹಾಜರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಎಚ್ಚರಿಕೆ ನೀಡಿದ್ದಾರೆ.
  ಚುನಾವಣೆ ಕರ್ತವ್ಯಕ್ಕೆ ನೇಮಕ ಮಾಡಲಾಗಿರುವ ಅಧಿಕಾರಿ, ಸಿಬ್ಬಂದಿಗಳ ಪೈಕಿ ಕೆಲವರು ಕಳೆದ ಮಾ. ೨೯ ರಂದು ಜರುಗಿದ ತರಬೇತಿಗೆ ಗೈರು ಹಾಜರಾಗಿರುವ ಬಗ್ಗೆ ವರದಿ ಬಂದಿದ್ದು, ಅಂತಹವರಿಗೆ ಈಗಾಗಲೆ ನೋಟೀಸ್ ಜಾರಿಗೊಳಿಸಲಾಗಿದೆ.  ಚುನಾವಣೆ ನಿಮಿತ್ಯ ಮತಗಟ್ಟೆ ಅಧಿಕಾರಿ, ಸಹಾಯಕ ಅಧಿಕಾರಿಗಳು ಅಥವಾ ಸಿಬ್ಬಂದಿಗಳಿಗೆ ವಹಿಸಲಾದ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾಗುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು.  ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ ಕಲಂ ೧೩೪ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್  
ಎಚ್ಚರಿಕೆ ನೀಡಿದ್ದಾರೆ.

Advertisement

0 comments:

Post a Comment

 
Top