ಉತ್ತರ ಕರ್ನಾಟಕದ ಪ್ರತಿಷ್ಠಿತ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮೇ.೨೨ ರಂದು ಸಂಜೆ ೫-೩೦ ಗಂಟೆಗೆ ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಮನವಿ ಮಾಡಿಕೊಂಡಿದ್ದಾರೆ.
ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಅಂಗವಾಗಿ ಜಾತ್ರೆಯು ಮೇ.೧೫ ರಿಂದ ಮೇ.೨೫ ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಮೇ.೧೫ ರಂದು ಕಂಕಣಧಾರಣ, ೨೧ ರಂದು ಸಂಜೆ ೭.೦೦ ಗಂಟೆಗೆ ಉತ್ಸವ, ೨೨ ರಂದು ಅಕ್ಕಿಪಡಿ ಹಾಗೂ ಅಂದು ಸಂಜೆ ೫-೩೦ ಗಂಟೆಗೆ ಮಹಾರಥೋತ್ಸವ ನೆರವೇರಲಿದೆ. ೨೩ ರಂದು ಬಾಳಿದಂಡಿಗಿ, ಕೊಂಡದ ಪೂಜಾ, ಗಂಗಾದೇವಿ ಪೂಜಾ, ಶ್ರೀದೇವಿಗೆ ಪ್ರಸಾದ ಕಟ್ಟುವುದು, ಬಾಳಿದಂಡಿಗೆ ಆರೋಹಣ, ೨೪ ರಂದು ಪಾಯಸ ಅಗ್ನಿಕುಂಡ, ಕೊಂಡದ ಪೂಜಾ, ಹಿಡಿದಕ್ಷಿಣೆ ವಿತರಣೆ, ಶ್ರೀದೇವಿಗೆ ಪ್ರಸಾದ ನಿವೇದನೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಶ್ರೀ ಹುಲಿಗೆಮ್ಮ ದೇವಿಗೆ ಸಲ್ಲಿಸುವ ಮುಡುಪು, ಬೆಳ್ಳಿ, ಬಂಗಾರ ಇತ್ಯಾದಿ ಕಾಣಿಕೆಗಳನ್ನು ದೇವಸ್ಥಾನದ ಕಚೇರಿಯಲ್ಲಿ ಕೊಟ್ಟು ರಶೀದಿ ಪಡೆಯಬೇಕು. ಜಾತ್ರೆಯ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಜಾತ್ರೆಗೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕೊಪ್ಪಳ, ಗಂಗಾವತಿ ಹಾಗೂ ಹೊಸಪೇಟೆಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರ್ರೀ ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ತಿಳಿಸಿದ್ದಾರೆ.
0 comments:
Post a Comment