PLEASE LOGIN TO KANNADANET.COM FOR REGULAR NEWS-UPDATES

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬಾಲ ಭವನ ಸೂಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃಧ್ಧಿ ಯೋಜನೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ಜಿಲ್ಲಾ ಮಟ್ಟದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಆಯೋಜಿಸಲಾಗಿತ್ತು. 
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ ಮಹಾಂತೇಶ ಮಲ್ಲನಗೌಡರ ಅವರು ನೆರವೇರಿಸಿ ಮಾತನಾಡಿ, ಇಂದಿನ ಮಕ್ಕಳು ಇಂದಿನ ಪ್ರಜೆಗಳು ಹಾಗಾಗಿ ಸರ್ಕಾರವು ಮಕ್ಕಳ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಕೆಳ ವರ್ಗದ ಮಕ್ಕಳಿಗಾಗಿ ಈ ರೀತಿಯ ಶಿಬಿರಗಳನ್ನು ಹಮ್ಮಿಕೊಂಡಿದೆ. ನೀವುಗಳು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಉತ್ತಮಪಡಿಸಿಕೊಂಡು ದೇಶಕ್ಕೆ ಆಸ್ತಿಗಳಾಗಿ ಕರೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ ವಹಿಸಿ ಮಾತನಾಡಿ, ಈ ಬೇಸಿಗೆ ಶಿಬಿರವನ್ನು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗಾಗಿ ಆಯೋಜಿಸುತ್ತಿದ್ದು ೧೦೦ ಮಕ್ಕಳು ಈ ಶಿಬಿರದ ಫಲಾನುಭವಿಗಳಾಗಿರುತ್ತಾರೆ.  ಈ ಶಿಬಿರದಲ್ಲಿ ಕರಾಟೆ/ಯೋಗ, ನೃತ್ಯ,ಬೊಂಬೆ ತಯಾರಿಕೆ, ಕಸದಿಂದ ರಸ ಮತ್ತು ಪವಾಡ ಬಯಲು ರಹಸ್ಯಗಳಂತಹ ವೈಜ್ಞಾನಿಕ ತರಬೇತಿಗಳನ್ನು ನೀಡಲಾಗುತ್ತಿದೆ ಮಕ್ಕಳು ಈ ಶಿಬಿರದಲ್ಲಿ ಸಕ್ರೀಯವಾಗಿ ಭಾಗವಹಿಸಿ ಶಿಬಿರದ ಸೂಕ್ತ ಸದ್ಬಳಕೆ ಮಾಡಿಕೊಳ್ಳಬೆಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಾಲಕರ ಬಾಲಮಂದಿರದ ಅಧೀಕ್ಷಕ ಇಮಾಲಪ್ಪ ಅವರು ಸ್ವಾಗತಿಸಿದರು, ಸಿಂಧು ದೊಡ್ಡೇಶ ಯಲಿಗಾರ ನಿರೂಪಿಸಿದರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುನಿರಾಜಪ್ಪನವರು ವಂದಿಸಿದರು, ಕೊಪ್ಪಳ ಶಿಶು ಅಬಿವೃದ್ಧಿ ಯೋಜನಾಧಿಕಾರಿ ಎಚ್.ಪಿ ಜಗದೀಶ, ವಂದೇ ಮಾತರಂ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷರಾದ ರಾಘವೇಂದ್ರ ಡಿ.ಎ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top