PLEASE LOGIN TO KANNADANET.COM FOR REGULAR NEWS-UPDATES

 ಉತ್ತರ ಕರ್ನಾಟಕದ ಪ್ರತಿಷ್ಠಿತ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು  ಗುರುವಾರ ಸಂಜೆ ಸಹಸ್ರಾರು ಜನ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಅರಿದು ಬಂದಿತು. ಭಕ್ತಾಧಿಗಳು ಮಹಾರಥೋತ್ಸವದಲ್ಲಿ ಪಾಲ್ಗೊಳ್ಳುವುದರ ಮೂಲಕ ಶ್ರೀ ಹುಲಿಗೆಮ್ಮದೇವಿಯ ಆಶೀರ್ವಾದ ಪಡೆದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಎಲ್ಲಾ ರೀತಿಯ ಅನುಕೂಲತೆಗಳನ್ನು ಒದಗಿಸಲು ಶ್ರಮಿಸಿದ್ದರು. ಸೂಕ್ತ ರೀತಿಯ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು.
ಈ ಜಾತ್ರಾ ಮಹೋತ್ಸವದಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ರೋಹಿಣಿ ಸೆಫಟ್ ಕೊಟೆಚ್, ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಿಗಿ, ಸಹಾಯಕ ಆಯುಕ್ತ ಮಂಜುನಾಥ, ಜಿ.ಪಂ.ಸದಸ್ಯ ಕೆ.ರಮೇಶ ಹಿಟ್ನಾಳ ಸೇರಿದಂತೆ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ವೈದ್ಯ, ಮುಖ್ಯಕಾರ್ಯನಿರ್ವಾಹಣ ಅಧಿಕಾರಿ ಚಂದ್ರಮೌಳಿ ಸೇರಿದಂತೆ ಕಮೀಟಿಯ ಪದಾಧಿಕಾರಿಗಳು ಹುಲಿಗಿ-ಮುನಿರಾಬಾದ್, ಹಿಟ್ನಾಳ, ಅಗಳಕೇರಾ, ಬಂಡಿಹರ್ಲಾಪುರ, ಶಿವಪುರ ಗ್ರಾ.ಪಂ.ಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಇತರ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top