PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಯೂನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ 1098 ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ, ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಜಾಥಾ ಕಾರ್ಯಕ್ರಮವನ್ನು ಜೂ.12 ರಂದು ಬೆಳಿಗ್ಗೆ 9.30 ಕ್ಕೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. 
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಶ್ರೀಕಾಂತ ಬಬಲಾದಿ ಅವರು ನೆರವೇರಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. 
ಮುಖ್ಯ ಅತಿಥಿಗಳಾಗಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‍ಸಿಯ ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ರೋಹಿಣಿ ಕಟೋಚ್ ಸೆಪಟ್, ಲಾ ಅಕಾಡೆಮಿ ಅಧ್ಯಕ್ಷರಾದ ಸಂಧ್ಯಾ ಬಿ.ಮಾದಿನೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ಬಿ.ಶರಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಮಹಾಲಿಂಗಪ್ಪ ದೋಟಿಹಾಳ, ಕಾರ್ಮಿಕ ಇಲಾಖೆಯ ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕರಾದ ಬಸಯ್ಯ ಎನ್.ಅಂಗಡಿ ಅವರು ಆಗಮಿಸಲಿದ್ದಾರೆ. 
ಉಪನ್ಯಾಸಕರಾಗಿ ಯೂನಿಸೆಫ್‍ನ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕ ಹರೀಶ ಜೋಗಿ ಅವರು ಜಿಲ್ಲಾ ಮಕ್ಕಳ ಹಕ್ಕು ಮತ್ತು ರಕ್ಷಣೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಅವರು ಬಾಲಕಾರ್ಮಿಕರ ಬಗ್ಗೆ ಸರಕಾರದ ಯೋಜನೆಗಳು ಹಾಗೂ ಅವುಗಳ ಉಪಯೋಗ ಯೋಜನ ಸಂಘದ ಪಕ್ಷಿನೋಟ ಕುರಿತು ಉಪನ್ಯಾಸ ನೀಡಲಿದ್ದಾರೆ. ನಂತರ ಬಾಲಕಾರ್ಮಿಕರ ಶಾಲೆಯಿಂದ ಮುಖ್ಯವಾಹಿನಿಗೆ ಸೇರಿದ ಮಕ್ಕಳು ಹಾಗೂ ಬಾಲಮಂದಿರದ ಮಕ್ಕಳಿಂದ ಸಾಂಸ್ಕøತಿಕ ಚಟುವಟಿಕೆಗಳ ಕಾರ್ಯಕ್ರಮಗಳು, ಬಾಲಿಕಾ ಸಂಘದ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 
ಜಾಥಾ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 8.00 ಗಂಟೆಗೆ ತಹಶೀಲ್ದಾರ್ ಕಛೇರಿಯಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ  

Advertisement

0 comments:

Post a Comment

 
Top