PLEASE LOGIN TO KANNADANET.COM FOR REGULAR NEWS-UPDATES

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇದೇ ಜೂ.16 ರಿಂದ 24 ರವರೆಗೆ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ತಿಳಿಸಿದ್ದಾರೆ.
ಜೂ.16 ರಂದು ಗಣಿತ, ಜೂ.17 ರಂದು ಕನ್ನಡ, ಜೂ.18 ರಂದು ವಿಜ್ಞಾನ, ಜೂ.19 ರಂದು ಇಂಗ್ಲೀಷ್, ಜೂ.21 ರಂದು ಭಾರತೀಯ ಅರ್ಥಶಾಸ್ತ್ರ, ಜೂ.23 ರಂದು ಸಮಾಜ ವಿಜ್ಞಾನ ಹಾಗೂ ಜೂ.24 ರಂದು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 07 ಪರೀಕ್ಷಾ ಕೇಂದ್ರಗಳಿದ್ದು, ಕೊಪ್ಪಳದಲ್ಲಿ 03, ಗಂಗಾವತಿಯಲ್ಲಿ 02, ಯಲಬುರ್ಗಾ ಹಾಗೂ ಕುಷ್ಟಗಿಯಲ್ಲಿ ತಲಾ 01 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.  ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕಾದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ ಮುಂತಾದ ಅಂಗಡಿಗಳನ್ನು ನಿಷೇದಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top