PLEASE LOGIN TO KANNADANET.COM FOR REGULAR NEWS-UPDATES

 ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯಕ್ರಮವನ್ನು ಮತ್ತೆ ಆರಂಭಿಸಿದ್ದು, ೦೧ನೇ ಜನೇವರಿ ೨೦೧೪ ರಂದು ೧೮ ವರ್ಷ ಪೂರ್ಣಗೊಂಡ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಬಹುದಾಗಿದೆ.
  ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಲೋಕಸಭಾ ಚುನಾವಣೆ ಪೂರ್ಣಗೊಂಡಿರುವುದರಿಂದ ರಾಜ್ಯಾದ್ಯಂತ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಕಾರ್ಯವನ್ನು ಪುನಃ ಪ್ರಾರಂಭಿಸಲಾಗಿದೆ. ೦೧ನೇ ಜನೇವರಿ ೨೦೧೪ ರಂದು ೧೮ ವರ್ಷ ಪೂರ್ಣಗೊಂಡ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ, ಇತ್ಯಾದಿಗಳಲ್ಲಿನ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು, ಅಥವಾ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು, ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ, ಅಥವಾ ತಹಶೀಲ್ದಾರ್ ಕಛೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನುwww.voterreg.kar.nic.inರಲ್ಲಿ ಆನ್‌ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ  

Advertisement

0 comments:

Post a Comment

 
Top