ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜು.03 ರಿಂದ 12 ರವರೆಗೆ ಹತ್ತು ದಿನಗಳ ಕಾಲ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸಕ್ತ ಸಾಲಿನ ದ್ವೀತಿಯ ಪೂರಕ ಪರೀಕ್ಷೆಯು ಜಿಲ್ಲೆಯ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ಕಲಂ 144ನೇ ಕಲಂ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆ ಅನ್ವಯ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇದಿಸಲಾಗಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ನಿಷೇಧಾಜ್ಞೆಯಲ್ಲಿ ತಿಳಿಸಿದೆ.

0 comments:
Post a Comment