PLEASE LOGIN TO KANNADANET.COM FOR REGULAR NEWS-UPDATES

 ಪ್ರಸಕ್ತ ವರ್ಷ ವಾರ್ತಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲೆಯಲ್ಲಿ ಇರುವ ಬೀದಿ ನಾಟಕ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಪ್ರತಿಯೊಂದು ಬೀದಿ ನಾಟಕ ತಂಡದಲ್ಲಿ ಕನಿಷ್ಠ ೧೦ ಜನ ಕಲಾವಿದರು ಇರಬೇಕು. ಇದರಲ್ಲಿ ೨ ಜನ ಮಹಿಳಾ ಕಲಾವಿದರು ಕಡ್ಡಾಯವಾಗಿರಬೇಕು. ಬೀದಿ ನಾಟಕದ ಜೊತೆಗೆ ಸಂಗೀತವನ್ನು ಸಹ ಈ ಕಲಾವಿದರು ಪ್ರಸ್ತುತಪಡಿಸಬೇಕಾಗುತ್ತದೆ. 
ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಈ ತಂಡಗಳು ತಮ್ಮ ಕಲೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಮುಟ್ಟಿಸಬೇಕಾಗುತ್ತದೆ. ಕಾರಣ ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು. 
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ತಂಡದ ಮುಖ್ಯಸ್ಥರು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಜೂನ್ ೧೩ ರೊಳಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ, ನಂತರ ಸೂಚಿಸಿದ ತಂಡಗಳು ಆಯ್ಕೆ ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ. 
ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಾರ್ತಾಧಿಕಾರಿಗಳು, ಕೊಪ್ಪಳ ಇವರಿಂದ (ದೂರವಾಣಿ ಸಂಖ್ಯೆ: ೦೮೫೩೯-೨೨೦೬೦೭) ಮಾಹಿತಿಯನ್ನು ಪಡೆಯಬಹುದಾಗಿದೆ. 

Advertisement

0 comments:

Post a Comment

 
Top