ಜಿಲ್ಲೆಯ ಯಲಬುರ್ಗಾ ತಾಲೂಕು ಕುಕನೂರಿನ ಕೋಳಿಪೇಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರಿ ಮುಖ್ಯ ಶಿಕ್ಷಕ ಮಹೇಶ ಸಬರದ್ ಹಾಗೂ ಸಹಶಿಕ್ಷಕ ಚಿದಾನಂದಪ್ಪ ಪತ್ತಾರ್ ಅವರನ್ನು ಅಮಾನತ್ತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ಆದೇಶ ಹೊರಡಿಸಿದ್ದಾರೆ.
ಈ ಇಬ್ಬರು ಶಿಕ್ಷಕರು ಜೂ.09 ರಂದು ಅದೇ ಶಾಲೆಯಲ್ಲಿಯೇ ಪರಸ್ಪರ ಹೊಡೆದಾಡಿ, ಶಾಲೆಯ ಸೌಹಾರ್ದ ವಾತಾವರಣ ಹಾಳು ಮಾಡಿದ್ದರು. ಅಲ್ಲದೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಶಿಕ್ಷಕರು ಕರ್ತವ್ಯ ಲೋಪವೆಸಗಿದ ಕುರಿತು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಶಿಸ್ತು ಕ್ರಮ ಜರುಗಿಸಲು ಶಿಫಾರಸ್ಸು ಮಾಡಿದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರಿ ಸೇವಾ ನಿಯಮ 1957 ರ ನಿಯಮ 10 (1) ಎ ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜೂ. 10 ರಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿದ್ದಾರೆ. ಕರ್ನಾಟಕ ನಾಗರೀಕ ಸೇವಾ ನಿಯಮ 98 ರ ಪ್ರಕಾರ ಅಮಾನತುಗೊಂಡ ಶಿಕ್ಷಕರು ಜೀವನಾಂಶ ಭತ್ಯಗೆ ಅರ್ಹರಿರುದ್ದು, ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಡಿಡಿಪಿಐ ಜಿ.ಹೆಚ್.ವೀರಣ್ಣ ಅವರು ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment