ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ-೧೯೯೩ ತಿದ್ದುಪಡಿ ಕುರಿತು ಜಿಲ್ಲಾ ಪಂಚಾಯತಿ ಕೊಪ್ಪಳ ಹಾಗೂ ಪ್ರಜಾಯತ್ನ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ತಜ್ಞರ ಸಮಿತಿಗೆ ಶಿಫಾರಸ್ಸು ಕಾರ್ಯಾಗಾರವನ್ನು ಜೂ.೧೧ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಪಂಚಾಯತ್‌ರಾಜ್ ತಿದ್ದುಪಡಿ ತಜ್ಞರ ಸಮಿತಿ ಸದಸ್ಯರು ಹಾಗೂ ಜಿ.ಪಂ. ಮಾಜಿ ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ನಿವೃತ್ತ ಪ್ರಾಚಾರ್ಯ ಎಚ್.ಎಸ್.ಪಾಟೀಲ್, ಅಲ್ಲಮಪ್ರಭು ಬೆಟ್ಟದೂರು, ಮಹಾಂತೇಶ ಮಲ್ಲನಗೌಡರ್, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ ಸೇರಿದಂತೆ ಜಿ.ಪಂ, ತಾ.ಪಂ., ಸರ್ವ ಸದಸ್ಯರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಉಪನಿರ್ದೇಶಕರು, ಎಲ್ಲಾ ತಾಲ್ಲೂಕಿನ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಆಯ್ದ ಸಂಘಗಳ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಮೂರು ಹಂತದ ಸಂರಚನೆಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿ ಮತ್ತು ಕಾರ್ಯಾವ್ಯಾಪ್ತಿ-ಮರುಚಿಂತನೆ, ನೈರ್ಮಲ್ಯ ಮತ್ತು ನೀರಿನ ನಿರ್ವಹಣೆಯಲ್ಲಿ ಪಂಚಾಯತ್‌ರಾಜ್ ಸಂಸ್ಥೆಗಳ ಪಾತ್ರ ಈ ವಿಷಯಗಳ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ತಿಳಿಸಿದ್ದಾರೆ.
0 comments:
Post a Comment