ಕೊಪ್ಪಳ. ನಗರದ ರಾಷ್ಟ್ರೀಯ ಹೆದ್ದಾರಿಯಿಂದ ರಾಘವೇಂದ್ರ ದೇವಸ್ಥಾನ ಮೂಲಕ ಹಾದು ರೈಲ್ವೆ ಸ್ಟೇಷನ್‌ಗೆ ಲಿಂಕ್ ಕಲ್ಪಿಸುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯೂ ಭರದಿಂದ ಸಾಗಿದ್ದು, ಬುಧವಾರ ಕೊಪ್ಪಳ ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸೊಂಡೂರ ಹಾಗೂ ಉಪಾಧ್ಯಕ್ಷ ಅಮ್ಜದ್ ಪಟೇಲ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಾಮಗಾರಿಯನ್ನು ತೀವ್ರಗತಿಯಲ್ಲಿ ಹಾಗೂ ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಸೂಚಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧ್ಯಕ್ಷ-ಉಪಾಧ್ಯಕ್ಷರು ಸೂಚಿಸಿದರು.
ಕೊಪ್ಪಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ನಗರಸಭೆಯಿಂದ ನಡೆಯುತ್ತಿರುವ ಇಂತಹ ಕಾಮಗಾರಿಗಳಿಗೆ ಸಾರ್ವಜನಿಕರೂ ಕೂಡ ಸಹಕಾರ ನೀಡಬೇಕು. ಕಾಮಗಾರಿ ವೇಳೆ ಏನೇ ತೊಂದರೆಯಾದರೂ ಸಹಕರಿಸಿ ಕಾಮಗಾರಿ ಪೂರ್ಣಗೊಳ್ಳಲು ಶ್ರಮಿಸಬೇಕೆಂದು ಇದೇ ಸಂದರ್ಭದಲ್ಲಿ ಉಪಾಧ್ಯಕ್ಷ ಅಮ್ಜದ್ ಪಟೇಲ್ ನಾಗರಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಾರ್ಡಿನ ಸದಸ್ಯ ಅನಿಕೇತ ಅಗಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ, ಗುತ್ತಿಗೆದಾರ ಕೃಷ್ಣ ಇಟ್ಟಂಗಿ, ವಾರ್ಡಿನ ಸಂಗಮೇಶ ಮತ್ತಿತರರು ಉಪಸ್ಥಿತರಿದ್ದರು.
0 comments:
Post a Comment