ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಸಮಾರಂಭ ಜು.11 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷ ಲತಾ ವೀರಣ್ಣ ಸಂಡೂರ, ಪ್ರಾಚಾರ್ಯ ತಿಮ್ಮಾರಡ್ಡಿ ಮೇಟಿ ಅವರು ಭಾಗವಹಿಸುವರು. ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಸುರೇಶಕುಮಾರ ಅವರು ವಿಶೇಷ ಉಪನ್ಯಾಸ ನೀಡುವರು.
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜು.11 ರಂದು ಬೆಳಿಗ್ಗೆ 8.30 ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಅಶೋಕ ವೃತ್ತದ ಮಾರ್ಗವಾಗಿ ಜವಾಹರ ರಸ್ತೆಯವರೆಗೆ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ್ತಿ ಳಿಸಿದ್ದಾರೆ.
0 comments:
Post a Comment