ಭಾರತೀಯ ಸೇನೆಯಲ್ಲಿನ ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ನರ್ಸಿಂಗ್ ಅಸಿಸ್ಟೆಂಟ್, ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸೇನಾ ಭರ್ತಿ ರಾ ್ಯಲಿ ಆ. 19 ರಿಂದ 23 ರವರೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಂಗಳೂರು ಹಾಗೂ ಬೆಳಗಾವಿಯ ಸೇನಾ ನೇಮಕಾತಿ ವಲಯದ ಆಶ್ರಯದಲ್ಲಿ ಈ ಸೇನಾ ಭರ್ತಿ ರಾ ್ಯಲಿ ನಡೆಯಲಿದ್ದು, ಆ. 19 ರಂದು ಕೊಪ್ಪಳ, ಬೀದರ್, ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಸೋಲ್ಜರ್ ಟೆಕ್ನಿಕಲ್ ಮತ್ತು ಸೋಲ್ಜರ್ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆ. 20 ರಂದು ಕೊಪ್ಪಳ, ಬೀದರ್, ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಸೋಲ್ಜರ್ ಟಿಡಿಎನ್‍ಎಸ್ (ವಿವಿಧ ವೃತ್ತಿಗಳ ಕಸುಬುದಾರರು) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆ. 21 ರಂದು ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ಕೊಪ್ಪಳ, ಬೀದರ್, ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ನೇಮಕಾತಿ ನಡೆಯಲಿದೆ. ಆ. 22 ರಂದು ಸೋಲ್ಜರ್ ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗೆ ರಾಜ್ಯದ ಬೆಳಗಾವಿ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮೀಣ, ಕೋಲಾರ, ಮೈಸೂರು, ಚಾಮರಾಜನಗರ, ಗದಗ, ಹಾವೇರಿ, ಮಂಡ್ಯ, ಚಿಕ್ಕಬಳ್ಳಾಪುರ, ರಾಮನಗರ, ಬಾಗಲಕೋಟೆ, ತುಮಕೂರು, ಉತ್ತರಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಉಡುಪಿ, ಬಿಜಾಪುರ ಮತ್ತು ಧಾರವಾಡ ಜಿಲ್ಲೆಯ ಅಭ್ಯರ್ಥಿಗಳಿಗೆ ನೇಮಕಾತಿ ನಡೆಯಲಿದೆ. ಆ. 23 ರಂದು ಸೋಲ್ಜರ್ ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗೆ ಕೊಪ್ಪಳ, ಬೀದರ್, ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹಾಗೂ ಅದೇ ದಿನ ರಾಜ್ಯದ ಎಲ್ಲ ಜಿಲ್ಲೆಗಳ ಮಾಜಿ ಸೈನಿಕರಿಗೆ ನೇಮಕಾತಿ ನಡೆಯಲಿದೆ.
ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 45 ಅಂಕಗಳೊಂದಿಗೆ ಪಾಸಾಗಿರಬೇಕು, ವಯಸ್ಸು 17 1/2 ರಿಂದ 21 ವರ್ಷ ವಯೋಮಿತಿಯಲ್ಲಿರಬೇಕು. ಸೋಲ್ಜರ್ ಟೆಕ್ನಿಕಲ್ ಹುದ್ದೆಗೆ ವಿಜ್ಞಾನ ವಿಷಯದೊಂದಿಗೆ ಪಿಯುಸಿ ಉತ್ತೀರ್ಣರಾಗಿರಬೇಕು, 17 1/2 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು. ಸೋಲ್ಜರ್ ನರ್ಸಿಂಗ್ ಅಸಿಸ್ಟೆಂಟ್, ಸೋಲ್ಜರ್ ಕ್ಲರ್ಕ್, ಸ್ಟೊರ್ ಕೀಪರ್ ಅಸಿಸ್ಟೆಂಟ್ ಹುದ್ದೆಗೆ ವಿಜ್ಞಾನ ವಿಷಯದೊಂದಿಗೆ ಪಿಯುಸಿಯಲ್ಲಿ ಶೇ. 50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿ 17 1/2 ರಿಂದ 23 ವರ್ಷದೊಳಗಿರಬೇಕು. ಸೋಲ್ಜರ್ ಟಿಡಿಎನ್‍ಎಸ್ (ವಿವಿಧ ವೃತ್ತಿಗಳ ಕಸುಬುದಾರರು) ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು, ವಯೋಮಿತಿ 17 1/2 ರಿಂದ 23 ವರ್ಷದೊಳಗಿರಬೇಕು. ಮಾಜಿ ಸೈನಿಕರ ನೇಮಕಾತಿಯಲ್ಲಿ ವಯೋಮಿತಿ 48 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಹುದ್ದೆಗಳ ನೇಮಕಾತಿಯು ಸಂಪೂರ್ಣ ಪಾರದರ್ಶಕವಾಗಿದ್ದು, ಲಿಖಿತ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ ಸೇನಾ ನೇಮಕಾತಿ ಕಚೇರಿ ಬೆಳಗಾವಿ- 0831-2465550, ಬೆಂಗಳೂರು- 080-25599290 ಅಥವಾ www.zrobangalore.gov.in ವೆಬ್‍ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ .
0 comments:
Post a Comment