ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಕಾನೂನು ಒಂದು ದಿನದ ಕಾರ್ಯಾಗಾರ, ಜು.23 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಕೋರ್ಟ್ ಆವರಣದ ಸಾಕ್ಷಿದಾರರ ಮೊಗಸಾಲೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸರ್ವಮಂಗಳ ಚಿಕ್ಕನಗೌಡ್ರ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ನ್ಯಾಯಾಧೀಶರಾದ ಶ್ರೀಕಾಂತ ದಾ.ಬಬಲಾದಿ ಅವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ರೋಹಿಣಿ ಕಟೋಚ್ ಸೆಪಟ್, ನ್ಯಾಯಾಧೀಶರಾದ ಬಿ.ದಶರಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ, ಲಾ ಅಕಾಡೆಮಿ ಅಧ್ಯಕ್ಷರಾದ ಸಂಧ್ಯಾ ಬಿ.ಮಾದಿನೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ಬಿ.ಶರಣಪ್ಪ, ವಕೀಲರಾದ ವಿ.ಎಂ.ಭೂಸನೂರುಮಠ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪಾಲ್ಗೊಳ್ಳುವರು.
ಮೊದಲನೇ ಅಧಿವೇಶನವು ಬೆಳಿಗ್ಗೆ 11 ರಿಂದ 1.30 ರವರೆಗೆ ಜರುಗಲಿದ್ದು, ಸಂಪನ್ಮೂಲ ವಕೀಲರಾದ ಹನುಮಂತರಾವ್ ಅವರು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ವಕೀಲರಾದ ಶೀವಲೀಲಾ ಹೊನ್ನೂರು ಅವರು ಬಾಲ್ಯ ವಿವಾಹ ನಿಷೇದ ಕಾಯ್ದೆ ಕುರಿತು ಉಪನ್ಯಾಸ ನೀಡುವರು.
ಎರಡನೇ ಅಧಿವೇಶನವು ಮಧ್ಯಾಹ್ನ 1.30 2.00 ರವರೆಗೆ ಜರುಗಲಿದ್ದು, ವಕೀಲರಾದ ಸಾವಿತ್ರಿ ಗಮನಿ ಅವರು ಹಿಂದು ಮಹಿಳೆ ಆಸ್ತಿ ಹಕ್ಕು ಹಾಗೂ ವಕೀಲರಾದ ಭೀಮಶೇನ್ ಜೋಶಿ ಅವರು ಸ್ತ್ರೀ ಭ್ರೂಣ ಹತ್ಯೆ ಕುರಿತು ಉಪನ್ಯಾಸ ನೀಡುವರು.
ಮೂರನೇ ಅಧಿವೇಶನವು ಮಧ್ಯಾಹ್ನ 3.30 ರಿಂದ 4.30 ರವರೆಗೆ ಜರುಗಲಿದ್ದು, ವಕೀಲರಾದ ಎಸ್.ಬಿ.ಪಾಟೀಲ್ ಅವರು ವರದಕ್ಷಿಣೆ ನಿಷೇಧ ಕಾಯ್ದೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ ಅವರು ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳು ಕುರಿತಾಗಿ ಉಪನ್ಯಾಸ ನೀಡುವರು .
0 comments:
Post a Comment