ಕೊಪ್ಪಳ: ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಕಾಮನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಶಹನಾಜಬೇಗಂ ಹೇಳಿದರು.ಅವರು ಸರ್ಕಾರಿ ಅಂಗವಿಕಲ ನೌಕರರ ಸಂಘ ಮತ್ತು ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡುತ್ತ,ಸಮಾಜದಲ್ಲಿ ಏನಾದರೂ ಬದಾವಣೆಯನ್ನು ಬಯಸುವುದಾರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ.ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣವನ್ನು ಪಡೆಯುವಂತಾಗಬೇಕು.ಗ್ರಾಮದಲ್ಲಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು ಎಂದು ಹೇಳಿದರು.
ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡುತ್ತ,ಸರ್ಕಾರವು ಇಂದು ಶಿಕ್ಷಣದ ಅಭಿವೃದ್ದಿಗಾಗಿ ಅನೇಕ ಉಪಯುಕ್ತವಾದ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದ ಬಿಸಿಯೂಟ,ಕ್ಷೀರಬಾಗ್ಯದಂತ ಅನೇಕ ಕಾರ್ಯಕ್ರಮಗಳಿಂದ ಶಾಲೆಯ ದಾಖಲಾತಿಯು ಕೂಡಾ ಹೆಚ್ಚಾಗಿದೆ.ಪೋಷಕರ ಅನಕ್ಷರತೆಯಿಂದ ಶಾಲೆಯನ್ನು ಬಿಡುವವರ ಸಂಖ್ಯೆಯು ಹೆಚ್ಚಾಗುತ್ತದೆ.ಪೋಷಕರಿಗೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಶಿಕ್ಷಣದ ಕಡೆಗೆ ಹೆಚ್ಚು ಗಮನಹರಿಸುವಂತೆ ಮಾಡಬೇಕು ಎಂದು ಹೇಳಿದರು.
ಜಾಗೃತಿ ಜಾಥಾದಲ್ಲಿ ಶಿಕ್ಷಕರಾದ ಸತೀಶ.ಎ.ಕೆ.,ಮಂಜುಳಾ.ಟಿ.,ರೇಖಾ.ಕೆ.ಎನ್.,ಆಶಾ.ಎಚ್ ಮುಂತಾದವರು ಹಾಜರಿದ್ದರು.
ಕೊನೆಯಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಶಿಕ್ಷಣದ ಕುರಿತಾದ ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಜಾಥಾ ನಡೆಸಲಾಯಿತು.
0 comments:
Post a Comment