ಕೊಪ್ಪಳ : ನನ್ನ ಮೇಲೆ ಅಭಿಮಾನವಿಟ್ಟು ನನ್ನನ್ನು ಕೊಪ್ಪಳ ಜಿಲ್ಲಾ ೬ ನೇ ತಿರುಳ್ಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ನಾನು ಋಣಿಯಾಗಿದ್ದೇನೆ. ಈ ಆಯ್ಕೆ ನನ್ನನ್ನು ಇನ್ನು ಹೆಚ್ಚಿನ ನಾಡು ನುಡಿಗೆ ಸೇವೆ ಸಲ್ಲಿಸಲು ಪ್ರೇರಣೆ ನೀಡಿದೆ. ಮುಂದಿನ ದಿನಮಾನಗಳಲ್ಲೂ ಕೂಡಾ ನಾನು ನಾಡು-ನುಡಿಗೆ ಶ್ರಮಿಸುವೆ ಎಂದು ಕೊಪ್ಪಳ ಕೊಪ್ಪಳ ಜಿಲ್ಲಾ ೬ ನೇ ತಿರುಳ್ಗನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಶೇಖರಗೌಡ ಮಾಲಿಪಾಟೀಲ ಹೇಳಿದರು.
ಅವರು ಸೋಮವಾರ ಕೊಪ್ಪಳದ ಸಾಹಿತ್ಯ ಭವನದಲ್ಲಿ ತಿರುಳ್ಗನ್ನಡ ಕಲೆ, ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನದ ಜಿಲ್ಲಾ ಘಟಕವು ಹಮ್ಮಿಕೊಂಡ ಸಮ್ಮೇಳನಕ್ಕೆ ಅಧಿಕೃತ ಆಹ್ವಾನವನ್ನು ಸ್ವೀಕರಿಸಿ ಮಾತನಾಡಿದರು.
ತಿರುಳ್ಗನ್ನಡ ಕಲೆ, ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಕೊಪ್ಪಳ ಜಿಲ್ಲಾ ೬ ನೇ ತಿರುಳ್ಗನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾಗಿರುವ ಶೇಖರಗೌಡ ಮಾಲಿಪಾಟೀಲರಿಗೆ ಸನ್ಮಾನಿಸಿ, ಸಮ್ಮೇಳನಕ್ಕೆ ಅಧಿಕೃತ ಆಹ್ವಾನವನ್ನು ನೀಡಿದರು.
ನೇಹ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಡಾ. ಮಹಾಂತೇಶ ಮಲ್ಲನಗೌಡರ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಗೆ ಶೇಖರಗೌಡರು ಹಲವಾರು ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿದ್ದಾರೆ. ಗಂಗಾವತಿಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಅವೆಲ್ಲವುಗಳಿಗೆ ಕಿರೀಟಪ್ರಾಯವಾಗಿದೆ ಎಂದರು.
ಜಾನಪದ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಬಸವರಾಜ ಆಕಳವಾಡಿ ಮಾತನಾಡುತ್ತಾ ಜಿಲ್ಲೆಯ ಸಾಹಿತ್ಯ ಕ್ಷೇತ್ರದಲ್ಲಿ ಗುಂಪುಗಾರಿಕೆ ಇದೆ. ಈ ಗುಂಪುಗಾರಿಕೆಯನ್ನು ಹೋಗಲಾಡಿಸಿ ಎಲ್ಲರನ್ನು ಒಂದೇ ವೇದಿಕೆಗೆ ತಂದು ಒಕ್ಕೋರಲಿನಿಂದ ಸಾಹಿತ್ಯ ಕ್ಷೇತ್ರವನ್ನು ಒಂದು ಗೂಡಿಸಿದರೆ ಕೊಪ್ಪಳ ಜಿಲ್ಲೆಯಲ್ಲಿ ಇನ್ನಷ್ಟು ಸಾಹಿತ್ಯಿಕ ಚಟುವಟಿಕೆಗಳು ನಡೆಯಲು ಕಾರಣವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ವೇದಿಕೆ ರಾಜ್ಯಾಧ್ಯಕ್ಷರಾದ ಮಹೇಶಬಾಬು ಸುರ್ವೆ ಮಾತನಾಡಿ, ಶೇಖರಗೌಡ ಮಾಲಿಪಾಟೀಲರು ಸರಳ, ಸಜ್ಜನ, ಸಂಘಟನಾ ಚತುರರಾಗಿದ್ದಾರೆ. ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದರು.
ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಎಂ. ಸಾಧಿಕಲಿ, ಹಿರಿಯ ಪತ್ರಕರ್ತರಾದ ಹೆಚ್.ಎಸ್. ಹರೀಶ, ಮಂಜುನಾಥ ಗೊಂಡಬಾಳ, ಶಿಕ್ಷಕರಾದ ಉಮೇಶ ಸುರ್ವೆ, ಸರಕಾರಿ ಅಂಗವಿಕಲ ನೌಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಬೀರಪ್ಪ ಅಂಡಗಿ ಚಿಲವಾಡಗಿ, ವೀರಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹೊದ್ಲೂರ, ಸಂಘಟಕರಾದ ರಾಮು ಪೂಜಾರ, ಅವಿನಾಶ ಮಲ್ಲನಗೌಡರ, ಅಂದಾನಸ್ವಾಮಿ ಬೂತಣ್ಣನವರ, ವ್ಯಂಗ್ಯ ಚಿತ್ರಕಾರ ಬದರಿನಾಥ ಪುರೋಹಿತ, ಮಲ್ಲಯ್ಯ ಲೈನದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಎನ್.ಎಂ. ದೊಡ್ಡಮನಿ ನಿರೂಪಿಸಿದರು. ಪತ್ರಕರ್ತರಾದ ವೈ.ಬಿ. ಜೂಡಿ ಸ್ವಾಗತಿಸಿದರು. ಪತ್ರಕರ್ತರಾದ ಜಿ.ಎಸ್. ಗೋನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಮುಖಂಡ ಶಿವು ಯಲಬುರ್ಗಿ ವಂದಿಸಿದರು.
0 comments:
Post a Comment