ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧರು, ಶಿಖ್ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವುದೇ ತಾಂತ್ರಿಕ ಕಾಲೇಜುಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್-30 ಕೊನೆಯ ದಿನವಾಗಿದ್ದು, ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿಗಳ ದಾಖಲೆಗಳ ಪ್ರತಿಗಳನ್ನು ಜಿಲ್ಲಾ ಬಿಸಿಎಂ ಕಛೇರಿ ಕೊಪ್ಪಳ ಇಲ್ಲಿ ಸಲ್ಲಿಸಲು ಅಕ್ಟೋಬರ್-10 ಕೊನೆಯ ದಿನವಾಗಿರುತ್ತದೆ. ನವೀಕರಣ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಲು ನವಂಬರ್-15, ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿಗಳ ದಾಖಲೆಗಳ ಪ್ರತಿಗಳನ್ನು ಜಿಲ್ಲಾ ಬಿಸಿಎಂ ಕಛೇರಿ ಕೊಪ್ಪಳ ಇವರಿಗೆ ಸಲ್ಲಿಸಲು ನವಂಬರ್-25 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವ ವೆಬ್‍ಸೈಟ್ ವಿಳಾಸ www.momaschoolarship.gov.in ಹಾಗೂ ಇತರ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ www.gokdom.kar.nic.in ನ್ನು ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ .
0 comments:
Post a Comment