ಜಿಲ್ಲೆಯ ಎಲ್ಲಾ ಕಾರ್ಯನಿರತ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರ ಸಂಘಗಳು, ಕಾಯ್ದೆ ಪ್ರಕಾರ ಸೆ.01 ರೊಳಗಾಗಿ 2013-14ನೇ ಸಾಲಿನ ಲೆಕ್ಕಪರಿಶೋಧನೆಯನ್ನು ಮಾಡಿಸುವಂತೆ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಕಾರ್ಯನಿರತ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರ ಸಂಘಗಳು, ಕಾಯ್ದೆ ಪ್ರಕಾರ ಸೆ.01 ರೊಳಗಾಗಿ 2013-14ನೇ ಸಾಲಿನ ಲೆಕ್ಕಪರಿಶೋಧನೆಯನ್ನು ಮಾಡಿಸಿ, ಲೆಕ್ಕಪರಿಶೋಧನಾ ವರದಿಯನ್ನು ಸರ್ವಸಾಧಾರಣಾ ಸಭೆಗೆ ಮಂಡಿಸಬೇಕಾಗಿದ್ದು, ಆದರೆ ಕೊಪ್ಪಳ ಜಿಲ್ಲೆಯ ಬಹುತೇಕ ಸಹಕಾರ ಸಂಘಗಳು ಇಲ್ಲಿಯವರೆಗೂ ಸನ್ನದು ಲೆಕ್ಕಪರಿಶೋಧಕರನ್ನಾಗಲಿ ಅಥವಾ ಇಲಾಖಾ ಲೆಕ್ಕಪರಿಶೋಧಕರನ್ನಾಗಲಿ ಆಯ್ಕೆಮಾಡಿಕೊಂಡು ಲೆಕ್ಕಪರಿಶೋಧನೆ ಮಾಡಿಸಿರುವುದಿಲ್ಲ. ಇದು ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಜೊತೆಗೆ ಮುಖ್ಯಕಾರ್ಯನಿರ್ವಾಹಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಕಾಯ್ದೆಯಲ್ಲಿ ಶಿಕ್ಷೆ ವಿಧಿಸಲು ಅವಕಾಶವಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ 2013-14ನೇ ಸಾಲಿನ ಲೆಕ್ಕ ಪರಿಶೋಧನೆಯನ್ನು ಮಾಡಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment