ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2013ನೇ ಸಾಲಿನಲ್ಲಿ ಯಾವುದೇ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಎಂ.ಫಿಲ್ ಹಾಗೂ ಪಿ.ಎಚ್.ಡಿ. ಪದವಿ ಪಡೆದ ಮಹಾಪ್ರಬಂಧಗಳ ಹಸ್ತ ಪ್ರತಿ ಮುದ್ರಣಕ್ಕೆ ಹಾಗೂ ಪ್ರೌಢಪ್ರಬಂಧಗಳ ಹಸ್ತ ಪ್ರತಿ ಮುದ್ರಣಕ್ಕೆ ಧನ ಸಹಾಯ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಿಸಿದ ಅರ್ಜಿ ನಮೂನೆಗಳನ್ನು ಹಾಗೂ ಧನ ಸಹಾಯ ನಿಯಮಾವಳಿಗಳನ್ನು ಜು .21 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ಕಛೇರಿಯಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ, ಬೆಂಗಳೂರು ಇವರಿಗೆ ನೇರವಾಗಿ ಜು.31 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ: 08539-221417 ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ .
0 comments:
Post a Comment