ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಮನೆ ಬಳಕೆಗಾಗಿ ಹಾಗೂ ವಾಣಿಜ್ಯ ಬಳಕೆಗಾಗಿ ಕೊಳವೆಬಾವಿ ಕೊರೆಯಿಸಿದ್ದು, ಅದು ನಿರುಪಯುಕ್ತವಾಗಿದ್ದಲ್ಲಿ ಕೂಡಲೇ ಅವುಗಳನ್ನು ಮುಚ್ಚಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಅನೇಕ ಕಡೆ ಅಹಿತಕರ ಘಟನೆಗಳಲ್ಲಿ ಚಿಕ್ಕ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಅದಲ್ಲದೇ ವಿಫಲವಾದ ಕೊಳವೆ ಬಾವಿಗಳನ್ನು ಮುಚ್ಚಲು ಸರ್ವೋಚ್ಚ ನ್ಯಾಯಾಲಯದ ಆದೇಶವಿದ್ದು, ಈ ಕ್ರಮವನ್ನು ಅನುಸರಿಸದಿದ್ದಲ್ಲಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಕೊಪ್ಪಳ ನಗರದ ನಾಗರಿಕರು ಬಳಕೆಗಾಗಿ/ವಾಣಿಜ್ಯಕ್ಕಾಗಿ ಕೊಳವೆ ಬಾವಿ ಕೊರೆಸಿದ್ದಲ್ಲಿ ವಿಫಲವಾದ ಕೊಳವೆ ಬಾವಿಗಳನ್ನು ಕೂಡಲೇ ಮುಚ್ಚಸಬೇಕೆಂದು ಪೌರಾಯುಕ್ತರು ತಿಳಿಸಿದ್ದಾರೆ.
0 comments:
Post a Comment