PLEASE LOGIN TO KANNADANET.COM FOR REGULAR NEWS-UPDATES

 : ಕಾರ್ಮಿಕ ಕಾಯ್ದೆ ಅಡಿ ನೋಂದಣಿ ಮಾಡಿಸಿ, ಇದುವರೆಗೂ ನವೀಕರಣ ಮಾಡಿಸಿಕೊಳ್ಳದೇ ಇರುವ ಕಾರ್ಮಿಕರು, ನವೀಕರಣ ಮಾಡಿಸಿಕೊಳ್ಳಲು ನ. 11 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. 
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫಲಾನುಭವಿಯ ನಿಂತು ಹೋದ ಸದಸ್ಯತ್ವವನ್ನು ಮರಳಿ ಪಡೆಯುವ ಅವಕಾಶವನ್ನು ಕಾರ್ಮಿಕ ಇಲಾಖೆ ಒದಗಿಸಿದೆ.  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ 2006 ಅಡಿ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗಳಲ್ಲಿ ಕಟ್ಟಡ ಕಾರ್ಮಿಕರೆಂದು ಹಿಂದೆ ಯಾವುದೇ ಅವಧಿಯಲ್ಲಿ ನೊಂದಣಿ ಮಾಡಿಸಿ ಗುರುತಿನ ಕಾರ್ಡ್ ಪಡೆದು ಇದುವರೆಗೆ ನವೀಕರಣ ಮಾಡದೇ ಇರುವ ನೊಂದಾಯಿತ ಕಟ್ಟಡ ಕಾರ್ಮಿಕರು ನ.11 ರೊಳಗಾಗಿ ನಿಯಮಾವಳಿಗಳಲ್ಲಿ ವಿಧಿಸಿರುವ ಶುಲ್ಕ ಮತ್ತು ದಂಡ ಪಾವತಿಸಿ, ಸಂಬಂಧಪಟ್ಟ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗಳಲ್ಲಿ ಸದಸ್ಯತ್ವವನ್ನು ನವೀಕರಣ ಮಾಡಿಸಿಕೊಳ್ಳಬಹುದಾಗಿದೆ. ಈ ಅವಧಿಯೊಳಗೆ ನವೀಕರಣ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹವರ ಸದಸ್ಯತ್ವ ರದ್ದುಪಡಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.  

Advertisement

0 comments:

Post a Comment

 
Top