ಕನ್ನಡ ಸಾಹಿತ್ಯ ಪರಿಷತ್ತು ಪ್ರಸಕ್ತ ಸಾಲಿಗೆ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2014 ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿರುತ್ತದೆ. ದಂಡ ಶುಲ್ಕ ರೂ.50/- ನ್ನು ಹೆಚ್ಚುವರಿಯಾಗಿ ಪಾವತಿಸಿ ಸೆಪ್ಟಂಬರ್-15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿಯನ್ನು ರೂ.10/- ಶುಲ್ಕ ಪಾವತಿಸಿ ಪರೀಕ್ಷೆ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಹದಿನೈದು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ದೂರವಾಣಿ ಸಂಖ್ಯೆ: 080-26623584 ಇವರನ್ನು ಸಂಪರ್ಕಿಸಬಹುದಾಗಿದೆ .
0 comments:
Post a Comment