ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾ ಪಟುಗಳ ಶೈಕ್ಷಣಿಕ ಶುಲ್ಕವನ್ನು ಮರು ಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುಮೋದಿತ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಮಳೇಮಲ್ಲೇಶ್ವರ ರಸ್ತೆ, ಕೊಪ್ಪಳ ಈ ಕಛೇರಿಯಲ್ಲಿ ನಿಗದಿತ ನಮೂನೆಯನ್ನು ಪಡೆದು, ಭರ್ತಿಮಾಡಿದ ಅರ್ಜಿಯೊಂದಿಗೆ ಸಾಧನೆಗಳ ದಾಖಲೆಗಳನ್ನು ಲಗತ್ತಿಸಿ, ಜು.25 ರೊಳಗಾಗಿ 03 ಪ್ರತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ದೂರವಾಣಿ ಸಂಖ್ಯೆ :08539-201400 ಸಂಪರ್ಕಿಸಬಹುದಾಗಿದೆ .
0 comments:
Post a Comment