PLEASE LOGIN TO KANNADANET.COM FOR REGULAR NEWS-UPDATES


 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಹಯೋಗದಲ್ಲಿ ನಗರದ ಬಾಲಕರ ಪ.ಪೂ. ಕಾಲೇಜಿನಲ್ಲಿ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳನ್ನು ಬಿಂಬಿಸುವ ನಿಟ್ಟಿನಲ್ಲಿ ಏರ್ಪಡಿಸಲಾಗಿದ್ದ ವ್ಯಂಗ್ಯಚಿತ್ರ ಪ್ರದರ್ಶನ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
  ಈ ಭಾಗದ ಖ್ಯಾತ ವ್ಯಂಗ್ಯಚಿತ್ರಕಾರ ಕೊಪ್ಪಳದ ಬದರಿಪುರೋಹಿತ್ ಅವರ ಕುಂಚದಲ್ಲಿ ಅರಳಿದ ವ್ಯಂಗ್ಯಚಿತ್ರಗಳು, ವಿದ್ಯಾರ್ಥಿಗಳ ಮನಸ್ಸಿಗೆ ನಾಟುವಂತಿದ್ದವು.  ಮದ್ಯ ಮತ್ತು ಮಾದಕ ವಸ್ತುಗಳ ದುಶ್ಚಟದ ಸೆಳೆವಿಗೆ ಸಿಲುಕಿ, ಅಧೋಗತಿಗೆ ತಳ್ಳಲ್ಪಡುವುದನ್ನು ವ್ಯಂಗ್ಯಚಿತ್ರಗಳು ಬಿಂಬಿಸಿದವು.  ಅಲ್ಲದೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ವ್ಯಂಗ್ಯಚಿತ್ರ ಪ್ರದರ್ಶನದ ಉದ್ಘಾಟನೆ ನೆರವೇರಿಸಿದರು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಹಿರಿಯ ವೈದ್ಯ ಡಾ. ಕೆ.ಜಿ. ಕುಲಕರ್ಣಿ, ಪ್ರಾಚಾರ್ಯ ಆರ್.ಬಿ. ರಾಜೂರ್, ವ್ಯಂಗ್ಯಚಿತ್ರಕಾರ ಬದರಿಪುರೋಹಿತ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top