ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆಸಲು ಉದ್ದೇಶಿಸಲಾಗಿದ್ದ ಜಿಲ್ಲಾ
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಕೊಪ್ಪಳ, ಗದಗ, ಮೈಸೂರು, ಚಿಕ್ಕಬಳ್ಳಾಪುರ, ಉಡುಪಿ ಜಿಲ್ಲೆಗಳಿಗೆ ಹಿಂದಿನ ಪದ್ಧತಿಯನ್ನು ಕೈಬಿಟ್ಟು, ಪಾರದರ್ಶಕ ನಿಯಮಗಳನ್ವಯ ಹೊರಗುತ್ತಿಗೆ ಆಧಾರದಲ್ಲಿ ರಸ್ತೆಗಳನ್ನು ನಿರ್ವಹಿಸಲು ಮತ್ತು ಅನುದಾನಗಳನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖಾಂತರ ನಿರ್ವಹಿಸಲು ಸರ್ಕಾರ ಸೂಚಿಸಿರುವುದು, ಜಿಲ್ಲಾ ಪಂಚಾಯತಿಯಿಂದ ಅನುಷ್ಠಾನಗೊಳಿಸುವುದು ಕಷ್ಟಸಾಧ್ಯವಾಗಿರುವುದರಿಂದ, ಹಿಂದಿನ ವ್ಯವಸ್ಥೆಯನ್ನು ಸರ್ಕಾರ ಮುಂದುರೆಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ ಎಂದು ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಅವರು ಸಭೆಯಲ್ಲಿ ಪ್ರಕಟಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment