PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಮೆರಿಟ್-ಕಂ-ಮೀನ್ಸ್ ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಯಾವುದೇ ತಾಂತ್ರಿಕ ಕಾಲೇಜುಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ  ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಮೂಲ ಅರ್ಜಿ ಮತ್ತು ದಾಖಲೆಗಳನ್ನು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಡೀಕರಿಸಿ  ಅ.10 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸಬಹುದಾಗಿದೆ. 
 ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕೊನೆಯ ಸೆ.15, ಮೂಲ ಅರ್ಜಿ ಮತ್ತು ದಾಖಲೆಗಳನ್ನು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಡೀಕರಿಸಿ ಸೆ.25 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದಾಗಿದೆ.
 ಅರ್ಜಿಯೊಂದಿಗೆ ವಿವಿಧ ದಾಖಲೆಗಳಾದ ಎಸ್‍ಎಸ್‍ಎಲ್‍ಸಿ/ಪಿಯುಸಿ/ಡಿಪ್ಲೋಮಾ ಅಂಕಪಟ್ಟಿ, ಆದಾಯ ಪ್ರಮಾಣಪತ್ರ, ಹಾಗೂ ಅಫಿಡೆವಿಟ್ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೆಬ್‍ಸೈಟ್ ವಿಳಾಸ :  momascholarship.kar.nic.in ಇತರೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ:  www.gokdom.gov.in ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಬಿಸಿಎಂ ಅಧಿಕಾರಿ ಕಲ್ಲೇಶ  ತಿಳಿಸಿದ್ದಾರೆ.

Advertisement

0 comments:

Post a Comment

 
Top