ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್, ಪ್ರಾದೇಶಿಕ ಸಾರಿಗೆ ಕಛೇರಿ ಕೊಪ್ಪಳ ಮತ್ತು ಸಾಲ ವಸೂಲಾತಿ ನ್ಯಾಯಾಧೀಕರಣ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳ ಬೃಹತ್ ಲೋಕ ಅದಾಲತ್ ಉದ್ಘಾಟನೆ ಸಮಾರಂಭ ಆ.೩೦ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎನ್.ಕೆ. ಪಾಟೀಲ್ ಅವರು ನೆರವೇರಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಅಶೋಕ ಬಿ.ಹಿಂಚಿಗೇರಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ ಜಿ.ನಿಜಗಣ್ಣವರ್, ಬೆಂಗಳೂರಿನ ಸಾಲ ವಸೂಲಾತಿ ನ್ಯಾಯಾಧೀಕರಣದ ಅಧ್ಯಕ್ಷ ಸಿ.ಆರ್. ಬೆನಕನಹಳ್ಳಿ, ಬಳ್ಳಾರಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಪ್ರಧಾನ ಕಛೇರಿ ಅಧ್ಯಕ್ಷ ಎಂ.ಜಿ. ಭಟ್, ನಿರ್ದೇಶಕರಾದ ರಾಘವೇಂದ್ರ, ರಾಜ್ಯ ವಕೀಲರ ಪರಿಷತ್‌ನ ಸದಸ್ಯೆ ಸಂಧ್ಯಾ ಬಿ.ಮಾದಿನೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಡಿ. ಪವಾರ್, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಭಾಗವಹಿಸುವರು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ಬಬಲಾದಿ ತಿಳಿಸಿದ್ದಾರೆ
0 comments:
Post a Comment