PLEASE LOGIN TO KANNADANET.COM FOR REGULAR NEWS-UPDATES

 ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಸೆ. 17 ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.
  ಕೊಪ್ಪಳ ಶಾಸಕ ಕೆ. ರಾಘವೇಂ
ದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ಸಂಡೂರ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ವಿ. ಶಿರೂರ ಅವರು ಹೈದ್ರಾಬಾದ್-ಕರ್ನಾಟಕ ವಿಮೋಚನೆ ಕುರಿತಂತೆ ವಿಶೇಷ ಉಪನ್ಯಾಸ ನೀಡುವರು.  ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ: ಶಿವಮೂರ್ತಿಸ್ವಾಮಿ ಅಳವಂಡಿ ಅವರ ಕುರಿತ ‘ಕರ್ನಾಟಕ ಹುಲಿ’ ಸಂಸ್ಮರಣ ಗ್ರಂಥದ ಬಿಡುಗಡೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸುವರು.  ಕಾರ್ಯಕ್ರಮದ ಅಂಗವಾಗಿ ಅಂದು ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ ಮತ್ತು ಗೈಡ್ಸ್, ಗೃಹ ರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮಗಳು ಜರುಗಲಿವೆ.  ಅದೇ ದಿನ ಸಂಜೆ 6 ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಮೈದಾನದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

Advertisement

0 comments:

Post a Comment

 
Top