ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಬರುವ ಅ.08 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಸೆ.22 ರಂದು ಮಧ್ಯಾಹ್ನ 3.00 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ವಹಿಸಲಿದ್ದಾರೆ. ಸಭೆಗೆ ಆಸಕ್ತ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಾಗಿ ಜಯಂತಿಯ ಆಚರಣೆಗೆ ಸಲಹೆ ಸೂಚನೆ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
0 comments:
Post a Comment