ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2013ನೇ ಸಾಲಿಗೆ ಯುವ ಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹಾನಿಸಲಾಗಿದೆ.
ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರುಗಳ ಕುರಿತು ನೇರವಾಗಿಯೇ ಆಗಲ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ಅಥವಾ ರಾಷ್ಟ್ರೀಯ ಭಾವೈಕೃತೆಗೆ ದಕ್ಕೆ ತರುವಂತಹ ಪ್ರಸ್ತಾಪವಾಗಿರಬಾರದು.
ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನೊಳಗಿನವರಾಗಿರಬೇಕು, ವಯಸ್ಸಿನ ದಾಖಲಾತಿ ಬಗ್ಗೆ ಎಸ್.ಎಸ್.ಎಲ್.ಸಿ. ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದೊಂದಿಗೆ, ಇದುವರೆಗೂ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರದೊಂದಿಗೆ, ತಾವು ರಚಿಸಿರುವ ಚೊಚ್ಚಲ ಕೃತಿಯನ್ನು ಬೆರಳಚ್ಚು/ಡಿ.ಟಿ.ಪಿ. ಮಾಡಿಸಿ, ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಗಳನ್ನು ಸೆ.30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ ಜೆ.ಸಿ.ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ:080-22484516/22017704 ಸಂಪರ್ಕಿಸಬಹುದಾಗಿದೆ .
0 comments:
Post a Comment