ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ೦೪ ಶಿಕ್ಷಕರು ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ೦೪ ಶಿಕ್ಷಕರು ಹೀಗೆ ಒಟ್ಟು ೦೮ ಶಿಕ್ಷಕರನ್ನು ಆಯ್ಕೆಮಾಡಲಾಗಿದ್ದು, ಸಾಹಿತ್ಯ ಭವನದಲ್ಲಿ ಜರುಗಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಈ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ.ಶ್ಯಾಮಸುಂದರ್ ಅವರು ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗ : ಕುಷ್ಟಗಿ ತಾಲೂಕಿನ ಹುಲಿಯಾಪೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಲಕ್ಷ್ಮಪ್ಪ ಪೂಜಾರ, ಗಂಗಾವತಿ ತಾಲೂಕಿನ ಬೇಗಾರವಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎಂ.ಶಾರದ, ಯಲಬುರ್ಗಾ ತಾಲೂಕಿನ ಮನ್ನಾಪೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಭುರಾಜ ವಕ್ಕಳದ್ ಹಾಗೂ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದ ಸಹ ಶಿಕ್ಷಕ ವಲ್ಲಭ ದುದ್ದಾಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರೌಢ ಶಾಲಾ ವಿಭಾಗ : ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಶೇಖರಪ್ಪ ರುಮಾಲದ, ಗಂಗಾವತಿಯ ಎಂ.ಎನ್.ಎಂ. ಪದವಿ ಪೂರ್ವ ಕಾಲೇಜಿನ (ಪ್ರೌ.ವಿ.) ಸಹ ಶಿಕ್ಷಕ ಎಸ್.ಶಿವಕುಮಾರ, ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ ಶರಣಬಸವೇಶ್ವರ ಪ್ರೌಢ ಶಾಲೆಯ ಸಹ ಶಿಕ್ಷಕ ರೇವಣಪ್ಪ ಅಬ್ಬಿಗೇರಿ ಹಾಗೂ ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ವೀರಣ್ಣ ಮಟ್ಟಿ, ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ.ಶ್ಯಾಮಸುಂದರ್ ತಿಳಿಸಿದ್ದಾರೆ.
0 comments:
Post a Comment