ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾಕ್ಷಿದಾರ ಮೊಗಸಾಲೆ ಕಟ್ಟಡ ಆವರಣದಲ್ಲಿ ಶುಕ್ರವಾರದಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ನ್ಯಾಯಾವಾದಿಗಳ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಾಲ ನ್ಯಾಯ (ಆರೈಕೆ ಮತ್ತು ಪೋಷಣೆ) ಕಾಯ್ದೆ ಹಾಗೂ ತಿದ್ದುಪಡಿ ಕಾಯ್ದೆಯ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ಎರಡು ದಿನದ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನ್ಯಾಯಾಧೀಶರಾದ ಶ್ರೀಕಾಂತ ದಾ. ಬಬಲಾದಿ ಅವರು ನೆರವೇರಿಸಿ ಮಾತನಾಡಿ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ ೧೪ ವರ್ಷದ ಹಿಂದೆ ಜಾರಿಯಾಗಿದ್ದು, ಬಾಲ ನ್ಯಾಯ ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಇನ್ನಾದರೂ ಮುಕ್ತವಾಗಿ ಚರ್ಚಿಸಿಬೇಕಾಗಿದೆ. ಬಾಲ ನ್ಯಾಯ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಮಕ್ಕಳ ಉಳಿವಿಗಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ವಸಂತಪ್ರೇಮಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುನಿರಾಜಪ್ಪ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಶಿವಲೀಲಾ ವನ್ನೂರು ನಿರೂಪಿಸಿದರು. ಸುಮಲತಾ ಆಕಳವಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಾಲ ನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment