PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಜನಸಂಪರ್ಕ ಸಂವಾದ ಕಾರ್ಯಕ್ರಮವನ್ನು ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. 
ಈ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಮಾತನಾಡಿ,ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ  ಸಂಬಂಧಿಸಿದಂತೆ ಲೈಂಗಿಕ ದೌಜನ್ಯದಿಂದ ಮಕ್ಕಳ ಸಂರಕ್ಷಣೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ೧೮ ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮತ್ತು ೨೧ ವರ್ಷದೊಳಗಿನ ಗಂಡು ಮಕ್ಕಳಿಗೆ ಯಾವದೇ ಕಾರಣಕ್ಕೂ ವಿವಾಹವನ್ನು ಮಾಡುವಂತಿಲ್ಲ ಒಂದುವೇಳೆ ಬಾಲ್ಯವಿವಾಹ ಮಾಡುವುದು ಕಾನೂನು ಪ್ರಕಾರ ಅಪರಾಧ ಎಂದು ತಿಳಿಸಿದರು. ಯಾವುದೇ ರೀತಿ ಕಾನೂನು ಸಂಘರ್ಷಕ್ಕೋಳಪಟ್ಟ ಮಕ್ಕಳು ಕಂಡುಬಂದಲ್ಲಿ ಕೂಡಲೆ ಮಕ್ಕಳ ವಿಷೇಶ ಪೋಲಿಸ್ ಘಟಕಕ್ಕೆ ತಿಳಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಹಿಳಾ ಸಾಂತ್ವನ ಅಧ್ಯಕ್ಷರಾಧ ಸರೋಜಾ ಬಾಕಳೆ ಮಾತನಾಡಿ, ಕುಟುಂಬದಲ್ಲಿ ಯಾವುದೇ ರಿತಿ ದೈಹಿಕ ಮಾನಸಿಕ ತೊಂದರೆಗೆ ಒಳಪಟ್ಟಲ್ಲಿ, ಯಾವುದೇ ರೀತಿ ಕಿರುಕುಳ ಕಂಡುಬಂದಲ್ಲಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ತಿಳಿಸಿ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಲ್ಲಿ ಸಲಹೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ.ಮಂಜುನಾತ ಇವರು ಮಾತನಾಡಿ, ಬಾಲ್ಯವಿವಾಹ ಮಾಡುವುದರಿಂದ ಮಕ್ಕಳ ಮೇಲೆ ದೈಹಿಕ,ಮಾನಸಿಕ ತೊಂದರೆಗೆ ಒಳಗಾಗುತ್ತಾರೆ. ಬಾಲ್ಯವಿವಾಹದಿಂದ ತಾಯಿ ಮರಣ ಮತ್ತು ಶಿಶು ಮರಣಗಳು ಆಗುವ ಸಾಧ್ಯತೆ ಹೆಚ್ಚಾಗುತ್ತವೆ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೋಬೇಷನ್ ಅಧಿಕಾರಿಗಳಾದ ಶಿವಲೀಲಾ ವನ್ನೂರರವರು ಮಕ್ಕಳ ರಕ್ಷಣೆಗಾಗಿ ಸರ್ಕಾರವು  ಹಲವಾರು ಕಾನೂನು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ. ಬಾಲ ನ್ಯಾಯ ಕಾಯ್ದೆ ೨೦೦೦ (ಆರೈಕೆ ಮತ್ತು ಪೋಷಣೆ) ಅಡಿ ಜಿಲ್ಲಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಹಾಗೂ ಬಾಲ ನ್ಯಾಯ ಮಂಡಳಿ ಸಹ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು  ಪ್ರಯೋಜಕತ್ವದಡಿ ಜಿಲ್ಲೆಯಲ್ಲಿನ  ಮಕ್ಕಳಿಗೆ ಹಾಗೂ ಜಿಲ್ಲೆಯಲ್ಲಿ ಗುರುತಿಸಿದ ತೀವ್ರ ಸಂಕಷ್ಠದಲ್ಲಿರುವ ಎಚ್.ಐ.ವಿ ಭಾದಿತ ಹಾಗೂ ಸೋಂಕಿತ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಗಾಗಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ ಎಂದರು. ಅಲ್ಲದೇ ಸದರಿ ಯೋಜನೆಯಡಿಯಲ್ಲಿ ಸಂಕಷ್ಠಕೊಳಗಾದ ಮಕ್ಕಳ ರಕ್ಷಣೆಗಾಗಿ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣೆಯನ್ನು ಆರಂಭಿಸಿದ್ದು, ೧೦೯೮ ದೂರವಾಣಿಗೆ ಕರೆ ಮಾಡಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೋಲಿಸ್ ಘಟಕದ ಸಿಬ್ಬಂಧಿಯಾದ ಸೋಮಶೇಖರ, ಜಗದೀಶ ಹಿರೇಮಠ, ಶಿಶು ಅಭಿವೃದ್ದಿ ಯೋಜನೆಯ ಮೇಲ್ವಿಚಾರಕಿಯರಾದ ಲಕ್ಷ್ಮೀ ಗೊರಲೂಟಿ ಇವರು  ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ರವಿಕುಮಾರ ಪವಾರ ನೆರವೇರಿಸಿದರು. ರವಿ ಬಡಿಗೇರ ನಿರೂಪಿಸಿದರು. ಸಿಂಧು ಯಲಿಗಾರ್ ಕೊನೆಯಲ್ಲಿ ವಂದಿಸಿದರು.

Advertisement

0 comments:

Post a Comment

 
Top