ಅವರು ಶನಿವಾರ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ವಕ್ಫ ಬೋರ್ಡ ಆಯೋಜಿಸಿದ್ದ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಜಿಲ್ಲಾ ಮುತವಲ್ಲಿಗಳ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.ಸಮಾಜದ ಎಲ್ಲ ರಂಗಗಳಲ್ಲೂ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯ ಮೊದಲು ಸಂಘಟಿತ ಸಮುದಾಯವಾಗಬೇಕು. ಜೊತೆಗೆ ಸಮುದಾಯದ ಎಲ್ಲರೂ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕಿದೆ ಎಂದರು.
ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಸಂಘಟನೆ ಜೊತೆಗೆ ಶಿಕ್ಷಣವನ್ನೂ ಪಡೆಯುವಂತಾಗಬೇಕು. ಅಲ್ಪಸಂಖ್ಯಾತರು ಶಿಕ್ಷಣವಂತರಾದಲ್ಲಿ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಿಕೆ ಮಾಡಿಕೊಳ್ಳಲು ಸಾಧ್ಯ ಎಂದ ಅವರು ಅಲ್ಪಸಂಖ್ಯಾತ ಸಮುದಾಯದವರಿಗೆ ಶಿಕ್ಷಣ ಅತ್ಯವಶ್ಯಕವಾಗಿರುವುದರಿಂದ ಸಮುದಾಯದ ಎಲ್ಲರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ವಕ್ಪ ಆಸ್ತಿ ಉಳಿಯಬೇಕಾದರೆ ಮೊದಲಿಗೆ ನಮ್ಮ ಸಮುದಾಯದ ಮುಖಂಡರು ಹಾಗೂ ಯುವಕರು ಸಂಘಟಿತರಾಗಬೇಕು. ಸಮುದಾಯದ ವಕ್ಫ ಆಸ್ತಿಯಿಂದ ಬರುವ ಆದಾಯವನ್ನು ಸಮುದಾಯದ ಬಡವರಿಗೆ, ಅನಾಥರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರ್ಥಿಕ ಸಹಾಯ ಕಲ್ಪಿಸಬೇಕು ಎಂದರು.
ಜಿಲ್ಲಾ ವಕ್ಫ ಬೋರ್ಡ ಅಧ್ಯಕ್ಷ ಮುಸ್ತಾಫ್ ಕಮಾಲ್ ಹಫೀಸ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಮೌಲಾನ ಮುಫ್ತಿ ನಜೀರ ಅಹ್ಮದ್, ಹಾಫೀಜ್ ಅಸದ್, ಅಲ್ಪಸಂಖ್ಯಾತರ ಇಲಾಖೆ ನಿರ್ದೆಶಕ ಅಕ್ರಂ ಪಾಷಾ, ಜಿಲ್ಲಾ ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಕಲ್ಲೇಶ, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ವ್ಯವಸ್ಥಾಪಕ ಜಾಕೀರ ಹುಸೇನ, ಕಾಂಗ್ರೆಸ್ ಮುಖಂಡ ವೀರಣ್ಣ ಸೊಂಡೂರ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.
0 comments:
Post a Comment