ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಗರದ ಶಾಸಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಜಗದೀಶ ಹಿರೇಮಠ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌಜನ್ಯಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌಜನ್ಯದಿಂದ ಮಕ್ಕಳ ಸಂರಕ್ಷಣೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗಿದೆ. ಅಲ್ಲದೇ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣಾಧಿಕಾರಿಗಳೆಂದು ನೇಮಿಸಿದ್ದು, ಆರೈಕೆ ಮತ್ತು ಪೋಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು ಆರೈಕೆ ಮತ್ತು ಪೋಷಣೆಗಾಗಿ ಮಕ್ಕಳನ್ನು ಹಾಜರಪಡಿಸಬಹುದಾಗಿದೆ ಎಂದು ತಿಳಿಸಿದರು. ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದಂತೆ ಮಕ್ಕಳ ಅಕ್ರಮ ಸಾಗಾಣಿಕೆ ಹಾಗೂ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಮಕ್ಕಳ ಸಹಾಯವಾಣಿಯ ತಂಡದ ಸದಸ್ಯರಾದ ರಾಘವೇಂದ್ರ ಕುಲಕರ್ಣಿಯವರು ಮಾತನಾಡಿ, ಮಕ್ಕಳ ಸಹಾಯವಾಣಿ ೧೦೯೮ ಕಾರ್ಯನಿರ್ವಹಿಸುತ್ತಿರುವ ಬಗ್ಗೆ, ಅನಾಥ, ನಿರ್ಗತಿಕ, ಭಿಕ್ಷಟಾನೆ, ಬಾಲಕಾರ್ಮಿಕ ಮಕ್ಕಳು ಕಂಡು ಬಂದರೆ ನೀವು ಉಚಿತವಾಗಿ ೧೦೯೮ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದರು. ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೋಬೇಷನ್ ಅಧಿಕಾರಿಗಳಾದ ಶಿವಲೀಲಾ ವನ್ನೂರರವರು ಮಕ್ಕಳ ರಕ್ಷಣೆಗಾಗಿ ಸರ್ಕಾರವು ಹಲವಾರು ಕಾನೂನು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ. ಬಾಲ ನ್ಯಾಯ ಕಾಯ್ದೆ ೨೦೦೦ (ಆರೈಕೆ ಮತ್ತು ಪೋಷಣೆ) ಅಡಿ ಜಿಲ್ಲಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಹಾಗೂ ಬಾಲ ನ್ಯಾಯ ಮಂಡಳಿ ಸಹ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪ್ರಯೋಜಕತ್ವದಡಿ ಜಿಲ್ಲೆಯಲ್ಲಿನ ಮಕ್ಕಳಿಗೆ ಹಾಗೂ ಜಿಲ್ಲೆಯಲ್ಲಿ ಗುರುತಿಸಿದ ತೀವ್ರ ಸಂಕಷ್ಠದಲ್ಲಿರುವ ಎಚ್.ಐ.ವಿ ಭಾದಿತ ಹಾಗೂ ಸೋಂಕಿತ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಗಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು. ಅಲ್ಲದೇ ಈ ಯೋಜನೆಯಡಿಯಲ್ಲಿ ಸಂಕಷ್ಠಕೊಳಗಾದ ಮಕ್ಕಳ ರಕ್ಷಣೆಗಾಗಿ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣೆಯನ್ನು ಆರಂಭಿಸಿದ್ದು, ೧೦೯೮ ದೂರವಾಣಿಗೆ ಕರೆ ಮಾಡಿ ಎಂದು ತಿಳಿಸಿದರು. ಈ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಸಿಂಧು ಯಲಿಗಾರ್ ನೆರವೇರಿಸಿದರು. ರವಿ ಬಡಿಗೇರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
0 comments:
Post a Comment