PLEASE LOGIN TO KANNADANET.COM FOR REGULAR NEWS-UPDATES

ಕಬಡ್ಡಿ ಪಂದ್ಯಾವಳಿ ಸಮಾರೋಪ ಸಮಾರಂಭ:
ಕೊಪ್ಪಳ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಾವು ಮಾನಸಿಕ ಸದೃಢತೆ ಹಾಗೂ ಶಾರೀರಿಕ ಬೆಳವಣಿಗೆಯನ್ನು ರೂಢಿಸಿಕೊಳ್ಳಬಹುದಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್ ಅಭಿಪ್ರಾಯಪಟ್ಟರು.
ಅವರು ಮಂಗಳವಾರ ಸಂಜೆ ನಗರದ ಸರಕಾರಿ ಬಾಲಕಿಯರ ಮೈದಾನದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಜಂಟಿಯಾಗಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತ ಕಬಡ್ಡಿ ತಂಡಕ್ಕೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಲ್ಲದ ಜೀವನ ಕೀಟ ತಿಂದಂತೆ ಎಂಬ ನಾಡ್ನುಡಿಯೇ ಕ್ರೀಡೆಯ ಮಹತ್ವವನ್ನು ತಿಳಿಸುವುದರಿಂದ ನಾವು ನಮ್ಮ ಜೀವನದಲ್ಲಿ ಕ್ರೀಯಾಶೀಲತೆ ಹೊಂದಲು ಹಾಗೂ ನಾವು ನಮ್ಮ ಮುಂದಿನ ಗುರಿ ತಲುಪಲು ನಾವು ನಮ್ಮ ನಿತ್ಯ ಜೀವನದಲ್ಲಿ ಕನಿಷ್ಠ ೧ಗಂಟೆಯಾದರೂ ಯಾವುದರೊಂದು ದೈಹಿಕ ಕಸರತ್ತಿನ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದ ಅವರು, ಕಬಡ್ಡಿ ನಮ್ಮ ಭಾರತೀಯ ಅಪ್ಪಟ ಆಟವಾಗಿರುವುದರಿಂದ ನಾವು ದೇಶಿಯ ಕ್ರೀಡೆಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾಗಿದೆ. ಯುವ ಜನಾಂಗ ಹೆಚ್ಚು ಹೆಚ್ಚು ದೇಶಿಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಅವರು ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯ ಎಂದರು.
ವೇದಿಕೆಯಲ್ಲಿ ಪೌರಾಯುಕ್ತ ರಮೇಶ ಪಟ್ಟೆದಾರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಣ್ಣ ಹದ್ದಿನ, ಮಾಜಿ ನಗರಸಭೆ ಸದಸ್ಯ ಮಾನ್ವಿ ಪಾಷಾ, ಕಾಂಗ್ರೆಸ್ ಮುಖಂಡ ವೀರಣ್ಣ ಸೊಂಡೂರ, ದೈಹಿಕ ಶಿಕ್ಷಣ ನಿರ್ದೇಶಕಿ ಶೋಭಾ ಕೆ.ಎಸ್,  ಪ್ರಾಂಶುಪಾಲ ಶಿವಪ್ಪ ಶಾಂತಪ್ಪನವರ ಮತ್ತಿತರರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top