PLEASE LOGIN TO KANNADANET.COM FOR REGULAR NEWS-UPDATES


ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಇರಕಲ್ಲಗಡದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌಜನ್ಯಗಳು ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು. ಮಕ್ಕಳ ವಿಶೇಷ ಪೊಲೀಸ್ ಘಟಕದ ಜಗದೀಶ ಹಿರೇಮಠ ಮಾತನಾಡಿ, ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಹಕ್ಕುಗಳ ಅಡಿ ಸರ್ಕಾರ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ರಕ್ಷಣಾ ಘಟಕದ ಸಿಂಧು ಯಲಿಗಾರ್ ಮಾತನಾಡಿ, ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಮಕ್ಕಳಿಗೆ ಕಲ್ಪಿಸಲಾಗಿರುವ ಯೋಜನೆಗಳ ಬಗ್ಗೆ ಹಾಗೂ ಬಾಲ ನ್ಯಾಯ ಕಾಯ್ದೆ 2000(ಪಾಲನೆ ಮತ್ತು ಪೋಷಣೆ) ಅಡಿ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿ, ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕ ಸಹ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ  ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪ್ರಾಯೋಜಕತ್ವದಡಿ, ಹಾಗೂ ಎಚ್.ಐ.ವಿ ಭಾದಿತ ಮತ್ತು ಸೋಂಕಿತ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಗಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.  ಮಕ್ಕಳ ಸಹಾಯವಾಣಿಯ ಬಸವರಾಜ  ಮಾತನಾಡಿ, ಮಕ್ಕಳ ಸಹಯವಾಣಿ 1098 ಕಾರ್ಯನಿರ್ವಹಿಸುತ್ತಿರುವ ಬಗ್ಗೆ  ಅನಾಥ, ಬಾಲಕಾರ್ಮಿಕ, ನಿರ್ಗತೀಕ, ಭಿಕ್ಷಟಾನೆ, ತೋಡಗಿರುವ ಮಕ್ಕಳು ಕಂಡು ಬಂದರೆ ನೀವು ಉಚಿತವಾಗಿ 1098 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎ.ಜಿ. ಶರಣಪ್ಪ ಪ್ರಾರ್ಚಾಯರು ಪದವಿ ಪೂರ್ವ ಕಾಲೇಜ್ ಇರಕಲ್ಲಗಡ ರವರು ಮಾತನಾಡಿ ನಮ್ಮ ದೇಶ ಸಂಸೃತಿ, ಆಚಾರ, ವಿಚಾರಗಳಿಗೆ ಹೆಸರಾದ ರಾಷ್ಟ, ಆದರೆ ಇಂದಿನ ಪರಿಸ್ಥಿತಿಯು ಜಾಗೃತೀಕರಣದ ಮಟ್ಟದಲ್ಲಿ ನಮ್ಮ ದೇಶದ ಗೌರವಕ್ಕೆ ಹಾನಿಯಾಗುತ್ತಿರುವುದು ವಿóಷಾದನೀಯ. ಇದಕ್ಕೆ ಕಾರಣಗಳನ್ನು ನೋಡುವುದಾದರೆ ನಮ್ಮಲ್ಲಿ ನೈತಿಕ ಮೌಲ್ಯಗಳ ಪ್ರಜ್ಞೆ ಇಲ್ಲವಾಗಿರುವುದು, ನಾವು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜ್ ಇರಕಲ್ಲಗಡದ ಉಪನ್ಯಾಸಕರು ಉಪಸ್ಥಿತ್ತಿತರಿದ್ದರು. ಪ್ರಾರ್ಥನೆಯನ್ನು ಅಮರಮ್ಮ ನೇರವೇರಿಸಿದರು. ರವಿ ಬಡಗೇರ ನಿರೂಪಿಸಿದರು. ಯಮುನಮ್ಮ ವಂದಿಸಿದರು.

Advertisement

0 comments:

Post a Comment

 
Top