ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಕರೆ ನೀಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿಯ ಉದ್ದೇಶದಿಂದ, ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರಲ್ಲಿ ಶೈಕ್ಷಣಿಕ ಅಭಿವೃದ್ಧಿ, ವಿವಿಧ ವೃತ್ತಿಪರ ತರಬೇತಿಗಳು, ಆರ್ಥಿಕ ಚಟುವಟಿಕೆಗಳಿಗೆ ಸಹಾಯಧನ ಮತ್ತು ಸಾಲ ಸೌಲಭ್ಯ ಮುಂತಾದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಗಳ ಬಗ್ಗೆ ಅರಿವು ಪಡೆದಲ್ಲಿ, ಮಾತ್ರ ಅರ್ಹ ಫಲಾನುಭವಿಗಳು ಸವಲತ್ತು ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಮಾತನಾಡಿದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರು ಅಲ್ಪಸಂಖ್ಯಾತರರಿಗೆ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಮಾಹಿತಿ ಒದಗಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಉಪಸ್ಥಿತರಿದ್ದರು.
0 comments:
Post a Comment