ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ 08 ಸಂಸ್ಥೆಗಳಿಗೆ, ವಿಶಿಷ್ಟ ಸಾಧನೆ ಮಾಡಿರುವ 02 ಸಂಸ್ಥೆಗಳಿಗೆ ಹಾಗೂ 15 ಜನ ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿಗಾಗಿ ಆಸಕ್ತ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರಿಗಾಗಿ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಹಾಗೂ ಸರ್ಕಾರದ ವತಿಯಿಂದ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ/ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೂ ಸಹ 05 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ಇವರಿಗೆ ಸೆ.30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಇಲಾಖೆಯ ವೆಬ್‍ಸೈಟ್ www.welfareofdisabled.kar.nic ರಲ್ಲಿ ಪಡೆಯಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment