ಜಿಲ್ಲಾ ಪಂಚಾಯತಿ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಸೆ.೦೫ ರಂದು ಬೆಳಿಗ್ಗೆ ೧೦.೩೦ ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಎಲ್.ಶೇಖಮಾಸ್ತರ, ಜಿ.ಪಂ.ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ವಿರುಪಾಕ್ಷಗೌಡ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ಮಾಲಿ ಪಾಟೀಲ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಂಗಾರಾಮ ಬಡೇರಿಯಾ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ. ಸಿಇಓ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಟಿ.ಡಿ.ಪವಾರ್, ನ್ಯಾಯವಾದಿ ಹನುಮಂತರಾವ್ ಕಂಪ್ಲಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಡಾ|| ವಿ.ಬಿ.ರಡ್ಡೇರ್ ಸೇರಿದಂತೆ ಜಿ.ಪಂ., ತಾ.ಪಂ., ನಗರಸಭೆಯ ಸರ್ವ ಸದಸ್ಯರು ಆಗಮಿಸಲಿದ್ದಾರೆ. ಅಲ್ಲದೇ ಅಂದು ಸಂಜೆ ೬ ಗಂಟೆಗೆ ಸಿಂಹಾಸನ ಖಾಲಿ ಇದೆ ಎಂಬ ನಾಟಕವನ್ನು ಶಿಕ್ಷಕರ ಕಲಾ ವೃಂದ ಕೊಪ್ಪಳದವರಿಂದ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಜರುಗಲಿದೆ.
ಭಾವಚಿತ್ರ ಮೆರವಣಿಗೆ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ.೦೫ ರಂದು ಬೆಳಿಗ್ಗೆ ೮ ಕ್ಕೆ ನಗರದ ಸಾರ್ವಜನಿಕ ಮೈದಾನದಿಂದ ಸಾಲಾರಜಂಗ್ ರಸ್ತೆ, ಚನ್ನಮ್ಮ ಸರ್ಕಲ್, ಜವಾಹರ ರಸ್ತೆಯ ಮೂಲಕ ಕನ್ನಡ ಸಾಹಿತ್ಯ ಭವನದವರೆಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರದ ಮೆರವಣಿಗೆ ಜರುಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ.ಶ್ಯಾಮಸುಂದರ್ ತಿಳಿಸಿದ್ದಾರೆ.
0 comments:
Post a Comment