ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಗೋಂದಲಿ ಜನಾಂಗದ ರಾಜ್ಯ ಮಟ್ಟದ ವಿಚಾರ ಸಂಕೀರಣ ಕಾರ್ಯಕ್ರಮ ಅ. ೨೦ ಮತ್ತು ೨೧ ರಂದು ಎರಡು ದಿನಗಳ ಕಾಲ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ವಿಚಾರ ಸಂಕೀರಣದ ಉದ್ಘಾಟನೆಯನ್ನು ಅ.೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರು ಹಾಗೂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಡಾ.ಬಿ.ಕೆ. ರವಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತವಾರಿ ಸಚಿವ ಶಿವರಾಜ ಎಸ್.ತಂಗಡಗಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್, ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು, ಗೋಂದಲಿ ಸಮಾಜದ ರಾಜ್ಯಾಧ್ಯಕ್ಷ ಶಿವಾನಂದ ಪಾಚಂಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಪಾಲ್ಗೊಳ್ಳಲಿದ್ದಾರೆ.
ಅ. ೨೦ ರಂದು ವಿವಿಧ ವಿಚಾರ ಗೋಷ್ಠಿಯಲ್ಲಿ ಡಾ.ಬಿ.ಆರ್.ಕುಮಾರ್, ಶಿವಾನಂದ ಪಾಚಂಗಿ, ಮಧುಕರ್ ಬೋಸ್ಲೆ, ಡಾ.ಜಕ್ಕ ಪಾರ್ಥಸಾರಥಿ. ಅ. ೨೧ ರಂದು ಗೋಪಾಲ ಪುಂಡಲೀಕ್ ಗೋಂದಲಿ, ಡಾ.ಬಿ.ಎಂ.ಜಯಶೀಲ, ನವೀನ ಮಂಡಗದ್ದೆ, ಎ.ಎಂ.ಮದರಿ ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅ.೨೧ ರ ಮಧ್ಯಾಹ್ನ ೨.೩೦ ಕ್ಕೆ ಸಮಾರೋಪ ಸಮಾರಂಭದಲ್ಲಿ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ರಂಗರಾಜು ವನದುರ್ಗ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ಉಪಾಧ್ಯಕ್ಷೆ ಮುದ್ದವ್ವ ರಂಗಪ್ಪ ಕರಡಿ, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಎಸ್.ಜೀಯಾಉಲ್ಲಾ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದುಪುಡಿ, ಬಿಸಿಎಂ ಅಧಿಕಾರಿ ಬಿ.ಕಲ್ಲೇಶ್ ಪಾಲ್ಗೊಳ್ಳುವರು. ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಆರ್.ಅನುರಾಧಾ ಪಟೇಲ್ ಅಧ್ಯಕ್ಷತೆ ವಹಿಸುವರು.
0 comments:
Post a Comment