PLEASE LOGIN TO KANNADANET.COM FOR REGULAR NEWS-UPDATES


ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ. ೦೮ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
  ಅಂದು ಬೆಳಿಗ್ಗೆ ೮ ಗಂಟೆಗೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ನಗರದ ಸಿರಸಪ್ಪಯ್ಯನಮಠದಿಂದ ಪ್ರಾರಂಭಗೊಳ್ಳಲಿದ್ದು, ಗಡಿಯಾರಕಂಭ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ.  ಬೆಳಿಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ. ವಿಶಾಲಾಕ್ಷಿ ಮಾಲಿಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಹೊಸಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕಡ್ಲಬಾಳ ಪನ್ನಂಗಧರ ಅವರು ವಿಶೇಷ ಉಪನ್ಯಾಸ ನೀಡುವರು .

Advertisement

0 comments:

Post a Comment

 
Top