ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯಲಬುರ್ಗಾದ ಆಶ್ರಯ ಕಾಲೋನಿ ಮುಧೋಳ ರಸ್ತೆಯಲ್ಲಿರುವ ಬಿಸಿಎಂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭ ಅ.೧೮ ರಂದು ಬೆಳಿಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಮಿಕ ಸಚಿವ ಪರಮೇಶ್ವರ ನಾಯ್ಕ್ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಬಸವರಾಜ ರಾಯರೆಡ್ಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ, ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ, ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಇಕ್ಬಾಲ್ ಅನ್ಸಾರಿ, ಕೆ.ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ.ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಜಿ.ಪಂ.ಸಾಮಾಜಿಕ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ತೋಟದ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಭಾಗೀರಥಿ ಮ.ಜೋಗಿನ, ಉಪಾಧ್ಯಕ್ಷೆ ಜಯಶ್ರೀ ಶ.ಅರಕೇರಿ, ತಾ.ಪಂ.ಅಧ್ಯಕ್ಷೆ ಮಹಾದೇವಿ ಕ.ಕಂಬಳಿ, ಉಪಾಧ್ಯಕ್ಷ ಶೇಖರಪ್ಪ ವಾರದ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಅನಿಲ ಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಎಸ್.ಜಿಯಾಉಲ್ಲಾ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ ಸೇರಿದಂತೆ ಜಿ.ಪಂ., ಪಟ್ಟಣ ಪಂಚಾಯತಿ ಹಾಗೂ ತಾಲೂಕ ಪಂಚಾಯತಿ ಸರ್ವ ಸದಸ್ಯರು ಪಾಲ್ಗೊಳ್ಳುವರು ಎಂದು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ ತಿಳಿಸಿದ್ದಾರೆ.
0 comments:
Post a Comment