PLEASE LOGIN TO KANNADANET.COM FOR REGULAR NEWS-UPDATES


ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಪೂರಕವಾಗಿದ್ದು,  ಕ್ರೀಡಾಪಟುಗಳ ಉತ್ತಮ ಆರೋಗ್ಯ ಕಾಯ್ದುಕೊಳ್ಳುವಲ್ಲಿ ಕ್ರೀಡೆಗಳು ಅತ್ಯಂತ ಪೂರಕವಾಗಿವೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ರಾಮಕೃಷ್ಣಯ್ಯ ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೊಪ್ಪಳ ತಾಲೂಕು ಮಟ್ಟದ ಪೈಕಾ (ಗ್ರಾಮೀಣ) ಕ್ರೀಡಾಕೂಟ ಜ್ಯೋತಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
  ವಿದ್ಯಾರ್ಥಿಗಳು ಶಾಲೆಯಲ್ಲಿ ಓದುವ ಪಾಠ ಪ್ರವಚನಗಳಿಗೆ ನೀಡುವಷ್ಟೇ ಮಹತ್ವವನ್ನು ಕ್ರೀಡೆಗಳಿಗೆ ನೀಡಬೇಕು, ದೈಹಿಕ ಹಾಗೂ ಮಾನಸಿಕ ಸದೃಢತೆಗಾಗಿ ಕ್ರೀಡೆಗಳು ಅತ್ಯವಶ್ಯಕವಾಗಿವೆ.  ವಿದ್ಯಾರ್ಥಿಗಳು ಆರೋಗ್ಯಪೂರ್ಣ ಜೀವನ ನಡೆಸಲು ಕ್ರೀಡೆಗಳು ಪೂರಕವಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡ ಅವರು, ಕ್ರೀಡಾಪಟುಗಳು ಉತ್ತಮವಾದ ದೇಹದಾರ್ಡತೆಯನ್ನು ಹೊಂದಿದ್ದು, ನಮ್ಮ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಲು ಉತ್ತಮ ಕ್ರೀಡಾಪಟುಗಳಾಗಿ ಆಯ್ಕೆ ಯಾಗಬೇಕು ಈ ಕ್ರೀಡೆಯಲ್ಲಿ ಭಾಗವಹಿಸಿ ಆಯ್ಕೆಯದವರು ಇದೇ ಅ.೧೩ ಹಾಗೂ ೧೪ ರಂದು ನಡೆಯುವ ಜಿಲ್ಲಾ ಮಟ್ಟದ ರಾಜೀವಗಾಂಧಿ ಖೇಲ್ ಅಭಿಯಾನ ಗ್ರಾಮೀಣ ಕ್ರೀಡಾಕೂಟಕ್ಕೆ ಕಡ್ಡಾಯವಾಗಿ ಭಾಗವಹಿಸಲು ಸೂಚನೆ ನೀಡಿದರು.
ಈ ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಬ್ಯಾಂಕ್ ಖಾತೆ ಹೊಂದಿದವರಿಗೆ ಅಧಿಕೃತವಾಗಿ ಪ್ರಥಮ ೨೫೦, ದ್ವೀತಿಯ ೧೫೦, ತೃತಿಯ ೧೦೦ ರೂ.ಗಳಂತೆ ನೇರವಾಗಿ ಬ್ಯಾಂಕಿನಿಂದ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಇನ್ನೂ ಉತ್ಸಾಹಿಗಳಾಗಿ ರಾಜ್ಯ/ರಾಷ್ಟ್ರ ಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಲು ಶುಭ ಹಾರೈಸಿದರು. 
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಹಿರೇಮಠ, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮುರ್ತುಜಾಸಾಬ, ತಾಲೂಕ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಯ್ಯ ಪೂಜಾರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರಪ್ಪ ಮುಧೋಳ, ಕ್ರೀಡಾ ಇಲಾಖೆಯ ಸಿಬ್ಬಂದಿಗಳಾದ ಕೆ.ಎಂ.ಪಾಟೀಲ್, ವಾಲಿಬಾಲ್ ತರಬೇತಿದಾರ ಸಿ.ಎ.ಪಾಟೀಲ್, ಖೋ ಖೋ ತರಬೇತಿದಾರ ಎ.ಯತಿರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಕ ಸಂಗಪ್ಪ ನಿರೂಪಿಸಿದರೆ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎನ್.ಎಸ್.ಪಾಟೀಲ್ ಅವರು ಸ್ವಾಗತಿಸಿ ಕೊನೆಯಲ್ಲಿ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಎಲ್ಲಾ ದೈಹಿಕ ಶಿಕ್ಷಕ/ಶಿಕ್ಷಕಿಯರು, ಕ್ರೀಡಾಪಟುಗಳು ಭಾಗವಹಿಸಿದ್ದರು. 

Advertisement

0 comments:

Post a Comment

 
Top