PLEASE LOGIN TO KANNADANET.COM FOR REGULAR NEWS-UPDATES

 ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿ ಕ್ಷೇತ್ರದ ಶ್ರೀ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿ ದೇವಾಲಯದ ಫಲಪೂಜಾ ಮಹೋತ್ಸವ ಕಾರ್ಯಕ್ರಮವು ಡಿ.06 ರಿಂದ ಡಿ.08 ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಲಿದೆ. 

ಕಾರ್ಯಕ್ರಮದ ಅಂಗವಾಗಿ ಡಿ.06 ರ ಶನಿವಾರ ರಾತ್ರಿ 8.30 ಗಂಟೆಗೆ ಮನ್ಮುಖ ತೀರ್ಥದಲ್ಲಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ತೆಪ್ಪೋತ್ಸವ ಜರುಗಲಿದೆ. ಡಿ.08 ರ ಸೋಮವಾರ ರಾತ್ರಿ 10 ಗಂಟೆಗೆ ಶ್ರೀ ಚಕ್ರ ತೀರ್ಥ ಕೋದಂಡರಾಮಸ್ವಾಮಿಯ ಸನ್ನಿಧಿಯಲ್ಲಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ಸವ ಜರುಗಲಿದೆ. ಡಿ.06 ರಿಂದ ಡಿ.08 ರವರೆಗೆ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯವರಿಗೆ ವಿಜಯನಗರದ ಅರಸರಾದ ಶ್ರೀ ಕೃಷ್ಣದೇವರಾಯರು ಸಮರ್ಪಿಸಿದ ನವರತ್ನ ಖಚಿತವಾದ ಸುವರ್ಣಮುಖ ಕಮಲದೊಂದಿಗೆ ಅಲಂಕರಿಸಲಾಗುವುದು. ಫಲಪೂಜಾ ನಂತರ  ಜಗದ್ಗುರುಗಳಿಂದ ಆಶೀರ್ವಚನ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಎಂ.ಹೆಚ್. ಪ್ರಕಾಶರಾವ್  ತಿಳಿಸಿದ್ದಾರೆ.

Advertisement

0 comments:

Post a Comment

 
Top