PLEASE LOGIN TO KANNADANET.COM FOR REGULAR NEWS-UPDATES

  ಪಠ್ಯವಿಷಯಗಳ ಜೊತೆಯಲ್ಲಿ ಸಹಪಠ್ಯ ಚಟುವಟಿಕೆಗಳ ಅವಶ್ಯವಿದೆ ಎಂದು ನಗರಸಭೆಯ ಸದಸ್ಯರಾದ ಮುತ್ತುರಾಜ ಕುಷ್ಟಗಿ ಹೇಳಿದರು.
  ನಗರದ ಸಿ.ಪಿ.ಎಸ್.ಶಾಲೆಯಲ್ಲಿ  ಶಿಕ್ಷಕರ ಕಲ್ಯಾಣ ನಿದಿಯಿಂದ ೨೦೧೪-೧೫ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ತಾಲೂಕ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ,ಸಮಾಜದ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ.ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು.ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗಾಗಿ ಪ್ರತಿಭಾ ಕಾರಂಜಿಯಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಹಾಯಕವಾಗಿದೆ.ಅದೇ ರೀತಿಯಲ್ಲಿ ಶಿಕ್ಷಕರಲ್ಲಿ ಇರುವ ಅನೇಕ ಪ್ರತಿಭೆಗಳು ಹೊರಬರಬೇಕಾದರೆ ಇಂತಹ ಸಹಪಠ್ಯ ಚಟುವಟಿಕೆಗಳ ಅವಶ್ಯವಿದೆ.ಜೊತೆಗೆ ಶಿಕ್ಷಣ ಇಲಾಖೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಿಕ್ಷಕರಲ್ಲಿರುವ ಪ್ರತಿಭೆಗಳನ್ನು ಗುರುತಿಸಬಹುದು ಎಂದು ಹೇಳಿದರು.
  ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಮಾರ್ತಂಡರಾವ್ ದೇಸಾಯಿ ಮಾತನಾಡಿ,ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು.ನಮ್ಮ ಜಿಲ್ಲೆಯ ಶಿಕ್ಷಣದ ಪ್ರಗತಿಯಲ್ಲಿ ಪ್ರತಿಯೊಬ್ಬ ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಪ್ಪಳ ವಲಯ ಶಿಕ್ಷಣ ಸಂಯೋಜಕರಾದ ಎಸ್.ಬಿ.ಕುರಿ ಮಾತನಾಡುತ್ತ,ವರ್ಷ ಪೂರ್ತಿ ಪಾಠ ಬೋಧನೆಯಲ್ಲಿ ನಿರತರಾಗುವ ಶಿಕ್ಷಕರುಗಳಿಗೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಅವರು ಕೂಡಾ ಅನೇಕ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಜೊತೆಯಲ್ಲಿ ಪಠ್ಯ ವಿಷಯಗಳಿಗಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆಯನ್ನು ನೀಡಿದಂತೆ ಆಗುತ್ತದೆ ಎಂದು ಹೇಳಿದರು.
 ಕಾರ್ಯಕ್ರಮದಲ್ಲಿ ಮುನಿರಾಬಾದ ವಲಯ ಶಿಕ್ಷಣ ಸಂಯೋಜಕರಾದ ಹನುಂತಪ್ಪ ನಾಯ್ಕ,ಇರಕಲ್ಲಗಡ ಶಿಕ್ಷಣ ಸಂಯೋಜಕರಾದ ಶ್ರೀನಿವಾಸ.ಎಸ್.ಪಿ.ಸಿ.ಪಿ.ಎಸ್.ಶಾಲೆಯ ಮುಖ್ಯೋಪಾದ್ಯಾಯರಾದ ಭರಮಪ್ಪ ಕಟ್ಟಿಮನಿ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಗುರುರಾಜ ಕಟ್ಟಿ ನಿರೂಪಿಸಿದರು.
ಶಿಕ್ಷಕರಾದ ನಾಗಪ್ಪ ನರಿ ಸ್ವಾಗತಿಸಿ,ವಿರುಪಾಕ್ಷಪ್ಪ ಬಾಗೋಡಿ ವಂದಿಸಿದರು.

Advertisement

0 comments:

Post a Comment

 
Top